ಚಿಕ್ಕಮಗಳೂರು | ಮೂಲಸೌಕರ್ಯ ಕೊರತೆ; ಚುನಾವಣೆ ಬಹಿಷ್ಕರಿಸುವುದಾಗಿ ನೊಂದ ಗ್ರಾಮಸ್ಥರ ಎಚ್ಚರಿಕೆ

Date:

  • ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾದ ಆಡಳಿತ
  • ಮನವೊಲಿಸಲು ಹಳ್ಳಿಗಳ ಭೇಟಿಗೆ ನಿರ್ಧರಿಸಿರುವ ಅಧಿಕಾರಿಗಳು

ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾಣದ ಹಿನ್ನೆಲೆ ಸ್ಥಳಿಯ ನಿವಾಸಿಗಳು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಮೂಡಿಗೆರೆ, ಶೃಂಗೇರಿ ಮತ್ತು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಮಲೆನಾಡು ಪ್ರದೇಶದ ಮತದಾರರು ಚುನಾವಣೆಯಲ್ಲಿ ಭಾಗವಹಿಸದಿರಲು ನಿರ್ಧಾರ ಮಾಡಿದ್ದಾರೆ.

“ಮೂಡಿಗೆರೆ ಮತ್ತು ಶೃಂಗೇರಿ ಭಾಗಗಳಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಈವರೆಗೂ ದುರಸ್ತಿ ಕಾರ್ಯ ಕೈಗೊಂಡಿಲ್ಲ. ರಸ್ತೆ ಮತ್ತು ಕುಡಿಯುವ ನೀರು ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸಲು ಆಡಳಿತ ವಿಫಲವಾಗಿದೆ” ಎಂಬುದು ಕ್ಷೇತ್ರದ ಮತದಾರರು ಆರೋಪವಾಗಿದೆ.

ಬಹುತೇಕ ಹಳ್ಳಿಗಳಲ್ಲಿ, ನಿವಾಸಿಗಳು ಮತದಾನ ಬಹಿಷ್ಕರಿಸುವ ಬಗ್ಗೆ ಬ್ಯಾನರ್‌ಗಳನ್ನು ಹಾಕಿದ್ದು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷದ ಮುಖಂಡರು ಮತ ಕೇಳಲು ಗ್ರಾಮಗಳಿಗೆ ಭೇಟಿ ನೀಡದಂತೆ ಆಗ್ರಹಿಸಿದ್ದಾರೆ.

ಶುಭಾನಗರ ಗ್ರಾಮದಲ್ಲಿ ಸೌಲಭ್ಯಗಳಿಲ್ಲ:

ಶುಭಾನಗರ ಗ್ರಾಮವು ಮೂಲ ಸೌಕರ್ಯಗಳಿಂದ ವಂಚಿತವಾಗಿರುವುದರಿಂದ ಇಲ್ಲಿಯ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಅರಣ್ಯ ಇಲಾಖೆಯು ಕೆಲವು ವರ್ಷಗಳ ಹಿಂದೆ ಸರಗೋಡು ಮೀಸಲು ಅರಣ್ಯದ ನಿವಾಸಿಗಳಿಗೆ ಯಾವುದೇ ಸೌಲಭ್ಯ ನೀಡದೆ ಶುಭನಗರ ಗ್ರಾಮಕ್ಕೆ ಸ್ಥಳಾಂತರಿಸಿತ್ತು.

“ಗ್ರಾಮದಲ್ಲಿ ಅಂಗನವಾಡಿ, ಶಾಲೆ ಮತ್ತು ಕುಡಿಯುವ ನೀರಿನ ಸೌಕರ್ಯ ಇಲ್ಲ. ಗ್ರಾಮಕ್ಕೆ ಸರಿಯಾದ ಬಸ್ ಸೌಲಭ್ಯವಿಲ್ಲ. ಇಲ್ಲಿ ನಮ್ಮ ಜೀವನ ಹದಗೆಟ್ಟಿದೆ. ನಾವು ಸರಗೋಡಿನ ನಮ್ಮ ಮೂಲ ಸ್ಥಳಕ್ಕೆ ಹಿಂತಿರುಗುತ್ತೇವೆ. ಇಲ್ಲಿ ಬದುಕು ಸಾಗಿಸುವುದು ತೀರ ದುಸ್ಥರವಾಗಿದೆ, ಯಾವುದೇ ಸರ್ಕಾರಿ ಸೌಲಭ್ಯಗಳ ನಿರೀಕ್ಷೆಯೂ ಇಲ್ಲ” ಎಂದು ಶುಭಾನಗರದ ಕಮಲಮ್ಮ ವಿಷಾದ ವ್ಯಕ್ತಪಡಿಸಿದರು.

ಮೊಬೈಲ್‌ ನೆಟ್ವರ್ಕ್‌ ಸಮಸ್ಯೆ:

ಕಳಸ ತಾಲೂಕಿನ ಎಚ್ ಬಾಳಿಗೆ ಪ್ರದೇಶದ ಗ್ರಾಮಗಳು ಸೌಲಭ್ಯಗಳಿಂದ ವಂಚಿತರಾಗಿರುವುದರಿಂದ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

“ಗ್ರಾಮಕ್ಕೆ ಇಂಟರ್‌ನೆಟ್‌ ಸಂಪರ್ಕ ಸರಿಯಾಗಿಲ್ಲ. ಮೊಬೈಲ್ ನೆಟ್ವರ್ಕ್‌ ಪಡೆಯಲು ನಾಲ್ಕು ಕಿಲೋ ಮೀಟರ್ ದೂರ ಪ್ರಯಾಣಿಸಬೇಕು. ಈ ಹಳ್ಳಿಗಳಲ್ಲಿ ಬಹುತೇಕ ಜನರು ಬಡವರು. ವಾಹನ ಸೌಲಭ್ಯಗಳಿಲ್ಲ” ಎಂದು ಸ್ಥಳೀಯ ನಿವಾಸಿ ಸ್ವೀಕಾರ್ ಅಸಮಧಾನ ವ್ಯಕ್ತಪಡಿಸಿದರು.

“ತುರ್ತು ಸಂದರ್ಭಗಳಲ್ಲಿ ಯಾರಿಗಾದರೂ ಆರೋಗ್ಯ ಸಮಸ್ಯೆ ಉಂಟಾದರೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವುದಿಲ್ಲ. ಇದರಿಂದ ಸ್ಥಳೀಯರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ” ಎಂದು ತಮ್ಮ ಅಳಲು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ ಮೈಸೂರು | ಚುನಾವಣಾ ಪ್ರಚಾರಕ್ಕೆ ರೌಡಿ ಶೀಟರ್‌ಗಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ

“ಪದೇಪದೆ ಸಂಪರ್ಕಿಸಿದರೂ, ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ಕೈಗೊಳ್ಳಲು ವಿಫಲರಾಗಿದ್ದಾರೆ. ಇದೀಗ ಗ್ರಾಮಸ್ಥರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮದಲ್ಲಿ ಮೊಬೈಲ್ ಟವರ್ ಅಳವಡಿಸದ ಹೊರತು ನಾವು ಮತ ಚಲಾಯಿಸುವುದಿಲ್ಲ” ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

“ಚುನಾವಣೆಯಲ್ಲಿ ಭಾಗವಹಿಸುವಂತೆ ಮತದಾರರ ಮನವೊಲಿಸಲು ಹಳ್ಳಿಗಳಿಗೆ ಭೇಟಿ ನೀಡಲಾಗುವುದು. ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಈ ಉದ್ದೇಶಕ್ಕಾಗಿ ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ...

ಯಾದಗಿರಿ | ಗೋಗಡಿಹಾಳ ಗ್ರಾಮದ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರ ನೇಮಕಕ್ಕೆ ಒತ್ತಾಯ

ಗೋಗಡಿಹಾಳ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಸರ್ಕಾರಿ...

ಸರ್ಕಾರಿ ಶಿಕ್ಷಕರ ಗೈರು ಹಾಜರಿ ತಡೆಗೆ ‘ಜಿಪಿಎಸ್‌’ ಕ್ರಮ

ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ...

ಪುರುಷ ನೌಕರರಿಗೂ ಶಿಶುಪಾಲನಾ ರಜೆ; ಸರ್ಕಾರ ಆದೇಶ

ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ ಶಿಶುಪಾಲನಾ ರಜೆಯನ್ನು ಒಂಟಿ ಪೋಷಕರಾಗಿರುವ ಪುರುಷ...