‌ಚಿಕ್ಕಮಗಳೂರು | ಅಕ್ರಮವಾಗಿ ಖರೀದಿಸಿದ್ದ ಜಮೀನು ವಶ; ಕಾಂಗ್ರೆಸ್‌ ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬದ ಹಕ್ಕು ರದ್ದು

Date:

ಅಕ್ರಮವಾಗಿ ಖರೀದಿಸಿದ್ದ 32 ಎಕರೆ ಜಮೀನನ್ನು ವಶಕ್ಕೆ ಪಡೆಯುವ ಮೂಲಕ ಕಾಂಗ್ರೆಸ್‌ನ ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬದ ಹಕ್ಕನ್ನು ರದ್ದುಪಡಿಸಿ, ಸರ್ಕಾರಿ ಜಮೀನು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

- Advertisement -

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಸಾಲಿನ ಶೋಲಾ ಅರಣ್ಯದಲ್ಲಿ ಸಗೀರ್ ಅಹ್ಮದ್ ಪತ್ನಿ ಫಾತಿಮಾಭಿ ಅವರ ಹೆಸರನಲ್ಲಿದ್ದ 32.21 ಎಕರೆ ಭೂಮಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದ್ದು, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು, ಆಸ್ತಿಯ ಮೇಲಿದ್ದ ಸಗೀರ್ ಕುಟುಂಬದ ಹಕ್ಕನ್ನು ರದ್ದುಪಡಿಸಿ, ಸರ್ಕಾರಿ ಜಮೀನು ಎಂದು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಉಡುಪಿ | ಮೊಸಳೆ ಕಣ್ಣೀರು ಹಾಕುವುದು ಬಿಡಿ: ಶಾಸಕ ಯಶ್ಪಾಲ್‌ಗೆ ಪ್ರಸಾದ್ ರಾಜ್ ಕಾಂಚನ್ ತಿರುಗೇಟು

ಇನಾಂ ದತ್ತಾತ್ರೇಯ ಪೀಠ ಗ್ರಾಮದ ಸರ್ವೆ ನಂಬರ್ 5ರಲ್ಲಿ ಫಾತಿಮಾಭಿ ಅವರ ಹೆಸರಿನಲ್ಲಿದ್ದ ಬಂಡಿದಾರಿ, ಕಾಲುದಾರಿ ಮೇಲಿನ ಹಕ್ಕನ್ನು ಜಿಲ್ಲಾಡಳಿತ ರದ್ದು ಮಾಡಿದೆ. ಈ ಜಮೀನು ಬೇರೆಯವರಿಗೆ ಮಂಜೂರಾಗಿತ್ತು. ಆದರೆ 1978ರಲ್ಲಿ ಸಗೀರ್ ಅಹ್ಮದ್ ತಮ್ಮ ಪತ್ನಿ ಫಾತಿಮಾಭಿ ಹೆಸರಿನಲ್ಲಿ ಅಕ್ರಮವಾಗಿ ಖರೀದಿಸಿದ್ದಾರೆ. ಈ ಮಂಜೂರಾತಿಯೇ ಅಕ್ರಮವೆಂದು ಜಿಲ್ಲಾಡಳಿತ ಘೋಷಿಸಿದೆ. ಅಲ್ಲದೆ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದ ಬಳಿಯಿರುವ ಸಗೀರ್ ಅಹ್ಮದ್ ಮನೆಯ ಬಾಗಿಲಿಗೆ ಜಿಲ್ಲಾಡಳಿತ ನೋಟಿಸ್ ಅಂಟಿಸಿದ್ದು, ಭೂಮಿ‌ ವಶಪಡಿಸಿಕೊಂಡಿರುವುದಾಗಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...