ಚಿಕ್ಕಮಗಳೂರು | ಭೂ ಹಗರಣ ಪ್ರಕರಣ; ಗಂಭೀರವಾಗಿ ಪರಿಗಣಿಸಿದ ಸರ್ಕಾರ

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ಕಡೂರು ತಾಲೂಕುಗಳಲ್ಲಿ ನಡೆದಿರುವ ಅಕ್ರಮ ಭೂ ಮಂಜೂರಾತಿ ಪ್ರಕರಣವನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಎರಡೂ ತಾಲೂಕುಗಳಲ್ಲಿ ನೀತಿ ನಿಯಮಗಳನ್ನು ಮೀರಿ ಕಾನೂನುಬಾಹಿರವಾಗಿ ಸುಮಾರು 6,000ಕ್ಕೂ ಅಧಿಕ ಎಕರೆ ಭೂಮಿ ಮಂಜೂರು ಆಗಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ಅವರು ನೀಡಿದ್ದು, ” ಅಂಕಿ ಅಂಶ ದಾಖಲೆಗಳನ್ನು ಪರಿಗಣಿಸಿ ತನಿಖೆ ನಡೆಸುತ್ತಿದ್ದು, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಮೂಡಿಗೆರೆ ತಾಲೂಕಿನಲ್ಲಿ 2000 ಪ್ರಕರಣ ಬೆಳಕಿಗೆ ಬಂದಿದ್ದು, ಅದರಲ್ಲಿ 1320 ಪ್ರಕರಣಗಳಲ್ಲಿ 3700 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಭೂ ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ ಅನುಮಾನಚೆಂದು ಪರಿಗಣಿಸಿರುವ 640 ಪ್ರಕರಣಗಳಲ್ಲಿ 1,500 ಎಕರೆ ಭೂಮಿ ಮಂಜೂರಾಗಿದೆ. ಇದರಲ್ಲಿ ಸ್ವಲ್ಪ ಏರಿಳಿತಗಳು ಆಗುವ ಸಾಧ್ಯತೆ ಇದೆ” ಎಂದು ತಿಳಿಸಿದರು.

Advertisements

“ಕಡೂರು ತಾಲೂಕಿನಲ್ಲಿ 2240 ಪ್ರಕರಣ ಬೆಳಕಿಗೆ ಬಂದಿದ್ದು, 1,030 ಪ್ರಕರಣಗಳಲ್ಲಿ 2,500 ಎಕರೆ ಭೂಮಿ ಅಕ್ರಮವಾಗಿ ಮಂಜೂರು ಆಗಿದ್ದು, ಇದರಲ್ಲಿ ಅರಣ್ಯ ಭೂಮಿಯೂ ಸೇರಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು ಪುರಸಭೆಯ ನಾಲ್ವರ ಸದಸ್ಯತ್ವ ಅನರ್ಹ; ಜಿಲ್ಲಾಧಿಕಾರಿ ಆದೇಶ

“ಎರಡನೇ ಹಂತದಲ್ಲಿ 961 ಅನುಮಾನಾಸ್ಪದ ಪ್ರಕರಣವೆಂದು ಗುರುತಿಸಲಾಗಿದೆ. ಅರ್ಜಿ ಸಲ್ಲಿಸದೆ, ಸಮಿತಿ ಒಪ್ಪಿಗೆ ಪಡೆಯದೆ ಸರ್ಕಾರಿ ಗೋಮಾಳ ಸೇರಿದಂತೆ ಭೂಮಿಯನ್ನು ಮಂಜೂರು ಮಾಡಿದ್ದು, ಕೆಲವು ಪ್ರಕರಣಗಳಲ್ಲಿ ಕಡತಗಳೇ ಇಲ್ಲ. ತನಿಖೆಯ ಪ್ರಗತಿಯನ್ನು ಪ್ರತಿದಿನ ತಾವೇ ಖುದ್ದಾಗಿ ಪರಿಶೀಲಿಸುತ್ತಿದ್ದು, ಕಂದಾಯ ಆಯುಕ್ತರು ಭೇಟಿ ನೀಡಿ ವರದಿಯನ್ನು ಪಡೆಯಲಾಗಿದೆ” ಎಂದರು.

“20 ದಿನದಲ್ಲಿ ಸ್ಪಷ್ಟವಾದ ವರದಿ ಸಲ್ಲಿಕೆ ಆಗುವ ಸಾಧ್ಯತೆಗಳಿವೆ. ಬಡವರಿಗೆ ತೊಂದರೆ ಇಲ್ಲ. ಭೂ ಒತ್ತುವರಿಗೆ ಸಂಬಂಧಿಸಿದಂತೆ ಅನುಮಾನಾಸ್ಪದ ಪ್ರಕರಣಗಳಲ್ಲಿ ಬಡವರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X