ಕೆಲಸಕ್ಕೆ ಹೊರಟಿದ್ದ ಕೂಲಿ ಕಾರ್ಮಿಕನ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಕೆಲಸಕ್ಕೆಂದು ಹೊರಟಿದ್ದ ಕೂಲಿ ಕಾರ್ಮಿಕ ಮಹೇಶ್ ಎಂಬುವವರ ಮೇಲೆ ಇಂದು ಬೆಳಿಗ್ಗೆ ಏಕಾಏಕಿ ಪಟ್ಟಣದ ಬಸ್ ನಿಲ್ದಾಣದ ಬಳಿ ಹುಚ್ಚುನಾಯಿ ದಾಳಿ ಮಾಡಿದೆ. ಅಲ್ಲದೆ ವಿವೇಕಾನಂದ ರಸ್ತೆಯಲ್ಲಿ ಮೂರು ವರ್ಷದ ಮಗುವಿನ ಮೇಲೆ ದಾಳಿ ಮಾಡಿದ ಪರಿಣಾಮ ಇಬ್ಬರಿಗೂ ಗಾಯಗಳಾಗಿದೆ.
ಇದನ್ನೂ ಓದಿದ್ದೀರಾ?ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು
ಪಟ್ಟಣದಲ್ಲಿ ಹಲವು ಜನರ ಮೇಲೆ ಹುಚ್ಚುನಾಯಿ ದಾಳಿ ಮಾಡಿದೆ ಎನ್ನಲಾಗಿದ್ದು, ಸಾರ್ವಜನಿಕರು ಭಯದಲ್ಲೇ ತಿರುಗಾಡುವಂತಾಗಿದೆ. ಈ ಕುರಿತು ಹುಚ್ಚುನಾಯಿ ದಾಳಿಗೊಳಗಾದ ಮಹೇಶ್ ಅವರು ಕೊಪ್ಪ ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದು, ಅಧಿಕಾರಿಗಳು ಕೂಡಲೇ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.
