ಚಿಕ್ಕಮಗಳೂರು l ಭೂಮಿ ವಶಪಡಿಸಿಕೊಂಡು 15 ವರ್ಷ ಕಳೆದರೂ ಪರಿಹಾರವಿಲ್ಲ; ರಾಷ್ಟ್ರಪತಿ ಭವನದ ಮುಂದೆ ಪ್ರಾಣಬಿಡಲು ಸಿದ್ಧರಾದ ರೈತರು

Date:

ಮಳಲೂರು ಏತ ನೀರಾವರಿ ಯೋಜನೆಗೆ ಭೂಮಿ ವಶಪಡಿಸಿಕೊಂಡಿರುವ ರೈತರಿಗೆ ಪರಿಹಾರ ನೀಡಬೇಕೆಂದು ಚಿಕ್ಕಮಗಳೂರು ನಗರದಲ್ಲಿ ಮಳಲೂರು ಏತ ನೀರಾವರಿ ಹೋರಾಟ ಸಮಿತಿಯವರಿಂದ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.

- Advertisement -

ಮಳಲೂರು ಏತ ನೀರಾವರಿಗೆ ಮಳಲೂರು, ಬಿಗ್ಗನಹಳ್ಳಿ, ಕಂಬಿಹಳ್ಳಿ, ತಗಡೂರು, ಕದ್ರಿಮಿದ್ರಿ ವ್ಯಾಪ್ತಿಯ 90 ಜನರ ರೈತರ 13 ಎಕರೆಗೆ ಪರಿಹಾರ ನೀಡಲು ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿದೆ. ನೀರಾವರಿಗೆ ಭೂಮಿ ವಶಪಡಿಸಿಕೊಂಡು 15 ವರ್ಷಗಳು ಕಳೆದರೂ ಪರಿಹಾರ ನೀಡಿಲ್ಲ, ಹಲವು ಬಾರಿ ಮನವಿ ಸಲ್ಲಿಸಿದರೂ ರೈತರ ಸಮಸ್ಯೆಗೆ ಜಿಲ್ಲಾಡಳಿತ ಇದುವರೆಗೂ ಸ್ಪಂದಿಸಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರು ರೈತರೊಂದಿಗೆ ಪರಿಹಾರದ ಬಗ್ಗೆ ಚರ್ಚಿಸಿ ಇತ್ಯರ್ಥಪಡಿಸದಿದ್ದಲ್ಲಿ ರಾಷ್ಟ್ರಪತಿ ಭವನದ ಮುಂದೆ ಪ್ರಾಣಬಿಡಲು ಸಿದ್ದರಿದ್ದೇವೆ. ಈ ಹಿಂದೆ ದಯಾಮರಣಕ್ಕೆ ಅರ್ಜಿ ಸಲ್ಲಿಸಲಾಗಿತ್ತು ಎಂದು ಮಳಲೂರು ಏತನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಸೋಮೇಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ರೈತರಿಗೆ ಹೆಚ್ಚಿನ ಬೆಲೆ ಪರಿಗಣಿಸಿ ಪರಿಹಾರ ಕೊಡಬೇಕು. ಭೂಸ್ವಾಧೀನ 2013 ಅಧಿನಿಯಮದ ಪ್ರಕಾರ 5 ಗುಂಟೆಯೊಳಗಿನ ಭೂಮಿಯನ್ನು ಪರಿಗಣಿಸಬಾರದು ಎಂದು ನಮೂದಿಸಲಿಲ್ಲ, ಈ ಹಿಂದೆ ಜಿಲ್ಲಾಡಳಿತ ರೈತರಿಗೆ ರೈಲ್ವೆ ಪರಿಹಾರದಲ್ಲಿ ಒಂದು ಗುಂಟೆಗಿಂತ ಮೇಲ್ಪಟ್ಟು ನೋಂದಣಿಯಾಗಿರುವ ಎಲ್ಲಾ ವ್ಯವಹಾರವನ್ನು ಪರಿಗಣಿಸುತ್ತೀರಿ, ರೈಲ್ವೆಗೆ ವಶಪಡಿಸಿಕೊಂಡಿರುವ ಭೂಮಿಗೆ ನೀಡಿರುವ ಪರಿಹಾರದಂತೆ ಮಳಲೂರು ಏತ ನೀರಾವರಿಗೆ ಪರಿಹಾರದಲ್ಲಿ ಅತಿಹೆಚ್ಚು ಬೆಲೆಯನ್ನು ಪರಿಗಣಿಸಬೇಕು ಎಂದು ಸೋಮೆಗೌಡ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರಾಷ್ಟ್ರದಲ್ಲೇ ರೈತರ ಆತ್ಮಹತ್ಯೆ ಕರ್ನಾಟಕ ಎರಡನೇ ಸ್ಥಾನ; ಸಿ.ಟಿ ರವಿ

ಈ ವೇಳೆ ಮಳಲೂರು ಏತನೀರಾವರಿ  ಹೋರಾಟ ಸಮಿತಿಯ ಮುಖಂಡರು, ಸದಸ್ಯರು, ಟಿ.ಎಲ್. ಗಣೇಶ್, ಧರ್ಮೇಗೌಡ, ರಘು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ...

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...