ಪ್ರೀತಿಸುತ್ತಿದ್ದ ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಎಂಬ ಯುವತಿಯನ್ನು ಪ್ರೀತಿಸುತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಎಂಬಾತ ತನ್ನ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಮಣ್ಣಿನಡಿ ಹೂತಿರುವ ಅಮಾನುಷ ಘಟನೆ ನಡೆದಿದೆ.
ಸೌಮ್ಯಾ ಕೊಪ್ಪದ ಜುಲೈ 2ರಂದು ತೀರ್ಥಹಳ್ಳಿಗೆ ಹೋಗುತ್ತೇನೆಂದು ಪೋಷಕರಿಗೆ ಹೇಳಿ ತನ್ನ ಮನೆಯಿಂದ ತೆರಳಿದ್ದಳು. ಬಳಿಕ ತನ್ನ ಪ್ರಿಯಕರನನ್ನು ಭೇಟಿ ಮಾಡಿ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಳು. ನಮ್ಮ ಮನೆಗೆ ಈಗ ಬರಬೇಡ. ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಅವಳನ್ನು ಸಾಗಹಾಕಲು ಮುಂದಾಗಿದ್ದ. ಇದಕ್ಕಾಗಿ ಇಬ್ಬರ ನಡುವೆ ಜಗಳವೇ ನಡೆದಿತ್ತು. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಬಂದ ಇಬ್ಬರ ನಡುವೆ ಮತ್ತೆ ವಾಗ್ವಾದ ಆರಂಭವಾಗಿ ಸಿಟ್ಟಿನಿಂದ ಸೃಜನ್ ಸೌಮ್ಯಾಳ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಲು ಆಗ್ರಹಿಸಿ ಧರಣಿ
ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಹಾಗಾಗಿ ಕತ್ತು ಹಿಸುಕಿ ಕೊಲೆ ಮಾಡಿ
ಸೌಮ್ಯಾಳ ಶವವನ್ನು ಮುಂಬಾಳು ಬಳಿ ಹೂತಿಟ್ಟು ಸೃಜನ್ ಮನೆಗೆ ತೆರಳಿದ್ದ. ಈ ನಡುವೆ ತಮ್ಮ ಮಗಳು ನಾಪತ್ತೆಯಾಗಿದ್ದಾಳೆಂದು ಸೌಮ್ಯಾ ಪೋಷಕರು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದರು. ಅನುಮಾನ ಬಂದು ಸೃಜನ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಪೊಲೀಸರ ಎದುರು ಸೌಮ್ಯಾಳನ್ನು ಕೊಲೆ ಮಾಡಿರುವ ಬಗ್ಗೆ ಬಾಯಿ ಬಿಟ್ಟಿರುವುದಾಗಿ ತಿಳಿದುಬಂದಿದೆ.
