ಚಿಕ್ಕಮಗಳೂರು | ವಿಡಿಯೋ ಮಾಡಲು ಹೋದಾಗ ದುರಂತ: ಎತ್ತಿನಗಾಡಿ ಹರಿದು ವ್ಯಕ್ತಿ ಸಾವು 

Date:

ಎತ್ತಿನಗಾಡಿ ಮೆರವಣಿಗೆಯ ವಿಡಿಯೋ ಮಾಡಲು ಹೋಗಿ ಎತ್ತಿನಗಾಡಿಯ ಅಡಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಅಂತರಘಟ್ಟ ಗಡೀಹಳ್ಳಿ ಗ್ರಾಮದ ಬಳಿ ನಡೆದಿದೆ.

- Advertisement -

ಗಡೀಹಳ್ಳಿ ಗ್ರಾಮದ ರವಿ (40) ಎಂಬಾತ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗಡಿಹಳ್ಳಿ ಗ್ರಾಮದಿಂದ ಅಂತರಘಟೆಗೆ ಎತ್ತಿನಗಾಡಿ ಓಡಿಸುವಾಗ ರಸ್ತೆ ಮಧ್ಯೆ ನಿಂತು ಮೆರವಣಿಗೆಯ ವಿಡಿಯೋ ಮಾಡುತ್ತಿದ್ದ ರವಿ ಮೇಲೆ ಎತ್ತಿನಗಾಡಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಕಡೂರು ತಾಲೂಕಿನ ದುರ್ಗಾಂಬ ಜಾತ್ರೆಗೆ ಎತ್ತಿನ ಗಾಡಿಗಳ ಮೂಲಕ ಭಕ್ತಾದಿಗಳು ಸಾಮಾನ್ಯವಾಗಿದ್ದು, ಈ ಜಾತ್ರೆಗೆ ಎತ್ತಿನ ಗಾಡಿಯ ಮೂಲಕ ಭಕ್ತಾಧಿಗಳು ಬರುವುದು ವಿಶೇಷ. ಐತಿಹಾಸಿಕ ಅಂತರಘಟ್ಟ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಪ್ರತಿ ವರ್ಷ ನಡೆಯುತ್ತದೆ. ಅದೇ ರೀತಿಯಲ್ಲಿ ಈ ವರ್ಷ ಜಾತ್ರಾ ಮಹೋತ್ಸವದ ಅಂಗವಾಗಿ ಎತ್ತಿನಗಾಡಿ ಓಡಿಸುವ ಸಂಪ್ರದಾಯವಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ʼಸೂಸಲವಾನಿʼ ಗ್ರಾಮದ ರಸ್ತೆಗಿಲ್ಲ ಡಾಂಬರು ಭಾಗ್ಯ; ಗ್ರಾಮಸ್ಥರ ಅಳಲು ಕೇಳೋರೆ ಇಲ್ಲ

ಜಾತ್ರೆಯು ಪ್ರಾರಂಭವಾಗುವ ತಿಂಗಳ ಮುಂಚೆ ಭಕ್ತಾಧಿಗಳು ಲಕ್ಷ ಲಕ್ಷ ರೂಪಾಯಿ ಕೊಟ್ಟು ಹೊಸ ಎತ್ತುಗಳನ್ನು ಕೊಂಡುಕೊಂಡು, ಎತ್ತಿನಗಾಡಿಯನ್ನು ಸಿಂಗರಿಸಿ ಜಾತ್ರೆಗೆ ಇತರೆ ಎತ್ತಿನ ಗಾಡಿಗಳೊಂದಿಗೆ ನಾಮುಂದು ತಾಮುಂದೆಂದು ಹೋಗುವರು ಹೀಗೆ ಅಜ್ಜಂಪುರ ತಾಲ್ಲೂಕು ಗಡೀಹಳ್ಳಿಗ್ರಾಮದಲ್ಲೂ ಜಾತ್ರೆಗೆ ಪ್ರತಿವರ್ಷ ಎತ್ತಿನಗಾಡಿ ಹೋಡುವುದು ಸಾಮಾನ್ಯವಾಗಿದ್ದು ಜಾತ್ರೆಗೆ ಹೊರಡುವ ಮುನ್ನ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ಎತ್ತಿನ ಗಾಡಿಗಳು ಹೋಗಿ ಪೊಜೆ ಮಾಡಿಸಿಕೊಂಡು ಅಲ್ಲಿಂದ ಬರುವಾಗ ಗಡಿಹಳ್ಳಿ ಗ್ರಾಮದಲ್ಲಿಯೇ ಅದೇ ಗ್ರಾಮದ ಮೃತ ರವಿ ಗಾಡಿಯ ಜೊತೆ ಓಡಿಬರುವಾಗ ಪಕ್ಕದಲ್ಲಿನ ಇನ್ನೊಂದು ಎತ್ತಿನಗಾಡಿಯ ನೊಗ ತಾಗಿ ಕೆಳಗೆ ಬಿದ್ದಿದ್ದು, ಆ ಗಾಡಿಯು ಅವನ ಮೇಲೆ ಹರಿದಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನಪ್ಪಿದ್ದಾರೆ. ಘಟನೆಯ ದೃಶ್ಯವು ಮೊಬೈಲ್‌ನಲ್ಲಿ ಸೆರೆಯಾಗಿದೆ.

ಮೃತನಿಗೆ ಒಂದು ಹೆಣ್ಣು, ಒಂದು ಗಂಡು ಮಗುವಿದೆ ಎಂದು ತಿಳಿದು ಬಂದಿದೆ. ಈ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...