ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದರಿಂದ ಬೇಸರಗೊಂಡ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದ ಸತೀಶ್(48) ಎಂಬುವವರು ಆತ್ಮಹತ್ಯೆಗೆ ಒಳಗಾಗಿರುವ ರೈತ. ಇವರು ಈರುಳ್ಳಿ ಬೆಳೆಯಲು ಸಾಲ ಮಾಡಿದ್ದು, ಅದನ್ನು ತೀರಿಸುವುದು ಹೇಗೆ ಎಂಬ ಆತಂಕದಲ್ಲೇ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಹಾಸನ | ಆನೆ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು
ರೈತ ಸತೀಶ್ ಅವರು ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ಹಲವು ಕಡೆ ಸಾಲ ಮಾಡಿದ್ದು, ಮಳೆಯನ್ನೇ ನಂಬಿಕೊಂಡು ಈರುಳ್ಳಿ ಬೆಳೆ ಬೆಳೆದಿದ್ದರು. ಇದೀಗ ಸಮರ್ಪಕ ಮಳೆಯಿಲ್ಲದ ಕಾರಣ ನೀರಿಲ್ಲದೆ ಈರುಳ್ಳಿ ಒಣಗಿದ್ದರಿಂದ ಮುಂದೆ ಸಾಲ ಮರುಪಾವತಿ ಮಾಡುವುದು ಹೇಗೆ ಎಂದು ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.