ಚಿಕ್ಕಮಗಳೂರು | ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಪಿಡಿಒ

Date:

ಸೈಟ್​​ ಒಂದಕ್ಕೆ ಎನ್​​ಒಸಿ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಒಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರಿಗೆ ‘ರೆಡ್‌ಹ್ಯಾಂಡ್‌’ಆಗಿ ಸಿಕ್ಕಿಬಿದ್ದಿದ್ದಾರೆ. ಚಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯತಿ ಪಿಡಿಒ ನಂಜುಂಡಮ್ಮ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ತಂಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಸ್ವತಿಪುರ ಗ್ರಾಮದ ನಿವಾಸಿ ತಿಮ್ಮಶೆಟ್ಟಿ ಎಂಬವರು ತಮ್ಮ ನಿವೇಶನಕ್ಕೆ ಎನ್‌ಒಸಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದರೆ, ಎನ್‌ಒಸಿ ಕೊಡಬೇಕೆಂದರೆ 10,000 ರೂ. ಲಂಚ ಕೊಡಬೇಕೆಂದು ಪಿಡಿಒ ನಂಜುಂಡಮ್ಮ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪಿಡಿಒ ಲಂಚ ಬೇಡಿಕೆಯಿಂದ ಅಸಮಾಧಾನಗೊಂಡ ತಿಮ್ಮಶೆಟ್ಟಿ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ತಿಮ್ಮಶೆಟ್ಟಿ ಅವರಿಗೆ ಹಣ ಕೊಟ್ಟು, ಅದನ್ನು ಲಂಚವಾಗಿ ನಂಜುಂಡಮ್ಮ ಅವರಿಗೆ ಕೊಡುವಂತೆ ಸೂಚಿಸಿದ್ದರು.

ಲೋಕಾಯುಕ್ತ ಪೊಲೀಸರ ಸೂಚನೆಯಂತೆ ತಿಮ್ಮಶೆಟ್ಟಿ ಅವರು ಗ್ರಾಮ ಪಂಚಾಯತಿಯಲ್ಲಿ ನಂಜುಂಡಮ್ಮ ಅವರಿಗೆ ಹಣ ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಡಿಒ ನಂಜುಂಡಮ್ಮ ಅವರನ್ನು ರೆಡ್‌ಹ್ಯಾಂಡ್‌ಆಗಿ ಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...