ಚಿಕ್ಕಮಗಳೂರು | ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ; ತಾಯಿ ಸೇರಿ ನಾಲ್ವರು ದೋಷಿ ಎಂದ ಕೋರ್ಟ್‌

Date:

ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾಫಿನಾಡು ಚಿಕ್ಕಮಗಳೂರಿನ ಪೋಕ್ಸೋ ಕೇಸ್‌ನ ತೀರ್ಪು ಇಂದು ಪ್ರಕಟವಾಗಿದೆ.

ಆತಂಕ ಮೂಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಅಪ್ರಾಪ್ತೆ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ನ್ಯಾಯಾಲಯವು ಇಂದು ಮಹತ್ವದ ತೀರ್ಪನ್ನು ನೀಡಿದ್ದು, ಪ್ರಕರಣದ ಮುಖ್ಯ ಆರೋಪಿ ತಾಯಿ ಹಾಗೂ ನಾಲ್ವರು ದೋಷಿಗಳೆಂದು ಹೇಳಿದೆ. ಉಳಿದ 49 ಜನರನ್ನು ನಿರ್ದೋಷಿಗಳು ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣದಲ್ಲಿ 53 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. 49 ಜನ ಆರೋಪಿಗಳನ್ನು ಖುಲಾಸೆಗೊಳಿಸಿದ್ದು, ನಾಲ್ವರು ತಪ್ಪಿತಸ್ಥರೆಂದು ಆದೇಶಿಸಲಾಗಿದೆ. ಪ್ರಕರಣದ ಸಂತ್ರಸ್ತ ಬಾಲಕಿ ತಾಯಿ ಒಳಗೊಂಡಂತೆ ಮೂವರು ತಪ್ಪಿತಸ್ಥರೆಂದು ನ್ಯಾಯಾಲಯ ಆದೇಶಿಸಿದ್ದು, ಕಳೆದ ಮೂರು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಲಾಗಿತ್ತು. ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 11ಕ್ಕೆ ಕಾಯ್ದಿರಿಸಿ ಆದೇಶಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏನಿದು ಪ್ರಕರಣ?

2021ಜನವರಿ 30 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಶೃಂಗೇರಿ ತಾಲೂಕಿನ ಗೋಚವಳ್ಳಿ ಸಮೀಪದ ಮನೆಯೊಂದರಲ್ಲಿ ಅಪ್ರಾಪ್ತ ಮಗಳನ್ನು ಮುಂದಿಟ್ಟು ಅಕ್ರಮ ವ್ಯವಹಾರ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಕ್ರಷರ್ ಮಾಲಿಕ ಹಾಗೂ ಕಾರ್ಮಿಕನ ಮೂಲಕ ಪ್ರಕರಣ ಬೆಳಕಿಗೆ ಬಂದಿತ್ತು.

ಅಂದೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಮಣ್ಯ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 2020ರಿಂದ ಬಾಲಕಿಯನ್ನು  ಬ್ಲ್ಯಾಕ್‌ಮೇಲ್ ಮಾಡಿ ನಿರಂತರ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಳ್ಳಲಾಗಿತ್ತು. ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಕೀಚಕರು ನಿರಂತರ ಅತ್ಯಾಚಾರ ನಡೆಸಿದರು ಎನ್ನುವ ಆರೋಪ ಕೇಳಿಬಂದಿತ್ತು.

ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ ಪೊಲೀಸರು, ತಾಯಿಯೇ ಮುಖ್ಯ ಆರೋಪಿ ಎನ್ನುವುದು ತನಿಖೆಯಲ್ಲಿ ಪತ್ತೆ ಹಚ್ಚಿದ್ದರು. ಶೃಂಗೇರಿಯ ಅಂದಿನ ವೃತ್ತ ನಿರೀಕ್ಷಕರು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆದಿತ್ತಲ್ಲದೆ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ಅಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯ ನಿರ್ವಹಿಸಿದ್ದ ಶೃತಿ ಪ್ರಕರಣ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನು ಓದಿದ್ದೀರಾ? ಉಜ್ವಲ ಫಲಾನುಭವಿಗಳಿಗೆ ₹300 ಗ್ಯಾಸ್ ಸಬ್ಸಿಡಿ: 2025ರವರೆಗೆ ವಿಸ್ತರಿಸಿದ ಕೇಂದ್ರ ಸರ್ಕಾರ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ದೋಷಿ ಎಂದು ಚಿಕ್ಕಮಗಳೂರು ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 11ಕ್ಕೆ ಕಾಯ್ದಿರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...