ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

Date:

‘ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಅತ್ಯಂತ ಮಹತ್ವದ ಸ್ಥಾನವಿದ್ದು, ಸುರಕ್ಷಿತ ಬಾಲ್ಯದ ನಿರ್ಮಾಣದಲ್ಲಿ ಅವರ ಜವಾಬ್ದಾರಿ ದೊಡ್ಡದು’ ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಕಿಣಿ ಅಭಿಪ್ರಾಯಪಟ್ಟರು.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ‘ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ಸುರಕ್ಷಿತ್ ಬಚ್ಫನ್ ಅಭಿಯಾನ’ದ ಅಂಗವಾಗಿ ಉಪನ್ಯಾಸಕರು ಹಾಗೂ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ತಮ್ಮ ದಿನದ ಬಹುಪಾಲು ಸಮಯವನ್ನು ಶಾಲಾ, ಕಾಲೇಜುಗಳಲ್ಲಿ ಕಳೆಯುತ್ತಾರೆ. ಮಕ್ಕಳ ನಡವಳಿಕೆಯಲ್ಲಿ ಏನಾದರೂ ಬದಲಾವಣೆ ಕಂಡುಬಂದರೆ, ಅದು ಮೊದಲು ಶಿಕ್ಷಕರ ಗಮನಕ್ಕೆ ಬರುತ್ತದೆ. ಪೋಷಕರಿಗಿಂತ ಹೆಚ್ಚಾಗಿ ಮಕ್ಕಳ ಮನಸ್ಸನ್ನು ಅರ್ಥಮಾಡಿಕೊಳ್ಳುವ ಶಕ್ತಿ ಶಿಕ್ಷಕರಿಗಿರುತ್ತದೆ. ಆದ್ದರಿಂದ ಸೂಕ್ಷ್ಮ ಸಂವೇದನೆಯುಳ್ಳ ಶಿಕ್ಷಕರು ಮಕ್ಕಳ ಚಲನವಲನಗಳನ್ನು ಗಮನಿಸಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ನಮ್ಮ ದೇಶದಲ್ಲಿ ಮಕ್ಕಳನ್ನು ದೇವರಿಗೆ ಹೋಲಿಸುತ್ತೇವೆ. ಆದರೆ, ವಾಸ್ತವದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಕಳವಳಕಾರಿ. 1೦ ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆಯೇ ಹೆಚ್ಚಿನ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಕಂಡುಬರುತ್ತಿದೆ. ಹೊರಗಿನವರಿಗಿಂತ ಹೆಚ್ಚಾಗಿ ಮನೆಯವರು ಹಾಗೂ ಶಿಕ್ಷಕ ವಲಯದಲ್ಲೇ ಇಂತಹ ಪ್ರಕರಣಗಳು ವರದಿಯಾಗುತ್ತಿರುವುದು ವಿಷಾದನೀಯ ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡಾನೆ ಸಂಚಾರ: ಎಚ್ಚರಿಕೆವಹಿಸಲು ಅರಣ್ಯ ಇಲಾಖೆ ಸೂಚನೆ 

ಈ ಕಾರ್ಯಕ್ರಮದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕದ ಸದಸ್ಯ ಕಾರ್ಯದಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾದೀಶ ವಿ.ಹನುಂತಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಮಂಜುಳಾ ಕೆ., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ರುದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಚ್. ಕೃಷ್ಣಪ್ಪ  ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಿಜೆಪಿ ಮುಖಂಡ ಮಹಿಳೆ ವಂಚನೆ ಆರೋಪ; ಪ್ರಕರಣ ದಾಖಲು 

ಆಲೂರು ತಾಲೂಕಿನಲ್ಲಿ ಬಿಜೆಪಿ ಮುಖಂಡ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪದಡಿ...

ಹಾಸನ | ಮದನಗೌಡರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಹ್ವಾನ; ಅನಂತಪುರಿ ಕನ್ನಡ ಉತ್ಸವ 2026

ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಡಿಸೆಂಬರ್ 3, 2026ರಂದು ನಡೆಯಲಿರುವ ಅನಂತಪುರಿ ಕನ್ನಡ...

ಚಿಕ್ಕಮಗಳೂರು | 56 ಕಾಡಾನೆಗಳ ಸ್ಥಳಾಂತರ ಕೈ ಬಿಡಬೇಕು; ಶಾಸಕ ಟಿ. ಡಿ ರಾಜೇಗೌಡ 

ಕಾಫಿನಾಡಿನಲ್ಲಿ ಭದ್ರಾ ಅಭಯಾರಣ್ಯಕ್ಕೆ ಬೇರೆಡೆಯಿಂದ 56 ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಸ್ತಾವನೆಯನ್ನು ಕೈಬಿಡುವಂತೆ...

ಕೋಲಾರ | ಜೋಡಿ ಕೃಷ್ಣಾಪುರ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ತಾಲೂಕಿನ ನರಸಾಪುರ ಹೋಬಳಿಯ ಜೋಡಿ ಕೃಷ್ಣಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...