ಚಿಕ್ಕಮಗಳೂರು | ದುರುದ್ದೇಶ, ಪ್ರತಿಕಾರದ ವಕ್ಫ್ ಮಸೂದೆ ಹಿಂಪಡೆಯಿರಿ: ಎಸ್‌ಡಿಪಿಐ ಆಕ್ರೋಶ

Date:

ಕೇಂದ್ರ ಸರ್ಕಾರ ತಿದ್ದುಪಡಿ ತರಲು ವಕ್ಫ್ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯಿಂದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

- Advertisement -

ಈ ವೇಳೆ ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಮಾತನಾಡಿ, “ಒಕ್ಕೂಟ ಬಿಜೆಪಿ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರಲು ಹೊರಟಿದ್ದು, ಇದು ಸಂವಿಧಾನ ವಿರೋಧಿಯಾಗಿದೆ. ಈ ಹಿಂದೆ ಮುಸಲ್ಮಾನರು ಸಮುದಾಯದ ಧಾರ್ಮಿಕ ಚಟುವಟಿಕೆಗಳಿಗೆ ಬಳುಸುವ ಸಲುವಾಗಿ ತಮ್ಮ ಆಸ್ತಿಗಳನ್ನು ವಕ್ಫ್ ಬೋರ್ಡ್‌ಗೆ ಹಸ್ತಾಂತರಿಸಿ ದಾನ ಮಾಡಿರುವುದಾಗಿದೆ. ಇದು ಮುಸ್ಲಿಮರ ಖಾಸಗಿ ಸ್ವತ್ತಾಗಿದ್ದು, ಇದೀಗ ಕೇಂದ್ರ ಸರ್ಕಾರವು ದುರುದ್ದೇಶದಿಂದ ವಕ್ಫ್ ಆಸ್ತಿಗಳನ್ನು ಕಬಳಿಸುವ ಸಲುವಾಗಿ ವಕ್ಫ್ ಬೋರ್ಡ್‌ನ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ಇದು ಜಾತ್ಯತೀತ ಮೌಲ್ಯಗಳ ವಿರುದ್ಧವಾಗಿರುವ ಈ ಮಸೂದೆ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ: ಜಿಲ್ಲಾಡಳಿತದಿಂದ ಶಾಂತಿ ಸಭೆ

ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಅಧ್ಯಕ್ಷ ಅಂಗಡಿ ಚಂದ್ರು, ಎಸ್‌ಡಿಪಿಐ ಜಿಲ್ಲಾ ಮುಖಂಡರಾದ ಅಝ್ಮತ್ ಪಾಷ, ಅತೀಖ್, ಎಐಎಂಡಿಎಫ್‌ನ ರಾಜ್ಯಾಧ್ಯಕ್ಷ ನಾಸೀರ್ ಅಹಮದ್, ಧರ್ಮ ಗುರು ಮೌಲಾನ ಯೂನುಸ್ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಕೆ ಪಿ ಖಾಲಿದ್, ಜಿಲ್ಲಾ ಸಮಿತಿ ಸದಸ್ಯ ಮುಸ್ತಫಾ ಆಲ್ದೂರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಆರೀಫ್, ಅಜ್ಞಾನ್ ಆಲ್ದೂರು, ಗ್ರಾಮ ಸಮಿತಿ ಅಧ್ಯಕ್ಷ ಮನ್ಸೂರ್, ಮುಸ್ಲಿಂ ಧರ್ಮ ಗುರುಗಳು ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...