ಚಿಕ್ಕಮಗಳೂರು | ವಾಕಿಂಗ್‌ ಹೋಗುತ್ತೇನೆಂದು ಹೇಳಿ ಹೋಗಿದ್ದ ವೈದ್ಯ ನಿಗೂಢ ಸಾವು

Date:

ವಾಕಿಂಗ್‌ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

- Advertisement -

ತರೀಕೆರೆ ತಾಲೂಕಿನ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯ ಉತ್ತಮ್ ಮೃತ ದುರ್ದೈವಿ. ಅವರು ಕಟ್ಟೆಹೊಳೆ ಗ್ರಾಮದ ಬಳಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಕಟ್ಟೆಹೊಳೆಯಲ್ಲಿಯೇ ವಾಸವಾಗಿದ್ದ ವೈದ್ಯ ಉತ್ತಮ್ ಗುರುವಾರ ಸಂಜೆ ವಾಕಿಂಗ್‌ಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಾರೆ. ಆದರೆ, ಮರಳಿ ಬಂದಿಲ್ಲ. ಅವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಭದ್ರಾವತಿ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

image 26

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...