ಆಸ್ತಿ ಮಾರಿದ ಹಣಕ್ಕಾಗಿ ಮೂವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟಿದ್ದರೆ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹತ್ಯೆಗೊಳಗಾದವರು ಕಾರ್ತಿಕ್(45) ಮತ್ತು ಆರೋಪಿ ತಂದೆ ಭಾಸ್ಕರ್ ಗೌಡ.
ಆಸ್ತಿ ಮಾರಿದ 12 ಲಕ್ಷ ರೂ. ಹಣಕಾಸಿನ ವಿಚಾರ ಕೊಲೆಯಲ್ಲಿ ಅಂತ್ಯವಾಗಿದೆ. ಆಸ್ತಿ ಹಣಕ್ಕಾಗಿ ತನ್ನ ತಂದೆ ಹಾಗೂ ಆಸ್ತಿ ಮಾರಾಟದ ಮಧ್ಯವರ್ತಿಯನ್ನು ಹತ್ಯೆ ಮಾಡಿದ್ದಾನೆ.
ಆರೋಪಿ ಸಂತೋಷ್ ಹಾಗೂ ಆತನ ತಂದೆಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ (45) ಎಂಬವರು ಮಧ್ಯಸ್ಥಿಕೆ ವಹಿಸಿದ್ದರು. ಆಸ್ತಿ ಮಾರಿ ಬಂದ ಹಣದಲ್ಲಿ ಪಾಲಿನ ವಿಚಾರವಾಗಿ ಜಗಳ ಹುಟ್ಟಿಕೊಂಡಿದ್ದು, ಈ ಸಂದರ್ಭದಲ್ಲಿ ಸಂತೋಷ್ ತನ್ನ ತಂದೆ ಭಾಸ್ಕರ್ ಗೌಡ, ತಾಯಿ ಹಾಗೂ ಮಧ್ಯವರ್ತಿ ಕಾರ್ತಿಕ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಏಮ್ಸ್ ಮಂಜೂರಾತಿ ಕುರಿತು ಪ್ರಾಣ ತ್ಯಾಗಕ್ಕೂ ಸಿದ್ಧ: ಕಾಂಗ್ರೆಸ್ ಮುಖಂಡ
ಮೂವರಿಗೂ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ತಂದೆ ಹಾಗೂ ಕಾರ್ತಿಕ್ ಮೃತಪಟ್ಟಿದ್ದಾರೆ. ತಾಯಿ ಸ್ಥಿತಿ ಗಂಭೀರವಾಗಿದೆ. ಹಲ್ಲೆ ನಡೆಸಿ ಆರೋಪಿ ಸಂತೋಷ್ ನೇರವಾಗಿ ಠಾಣೆಗೆ ಹೋಗಿದ್ದಾನೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.