ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ತುಪ್ಪರು ಗ್ರಾಮದಲ್ಲಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ತುಪ್ಪುರು ಗ್ರಾಮಸ್ಥರು ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
“ತುಪ್ಪರು ಗ್ರಾಮದ ಸರ್ಕಾರಿ ಜಾಗದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಅನುಮತಿ ನೀಡುವಂತೆ ಹಿರೇಗದ್ದೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ಕೂಡ ಅನುಮತಿ ನೀಡಲು ನಿರಾಕರಿಸಿದ್ದಾರೆ” ಎಂದು ಗ್ರಾಮಸ್ಥರು ಆರೋಪಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ಆನೆ ಹಾವಳಿ ಹೆಚ್ಚುತ್ತಿದ್ದರೂ ಶಾಶ್ವತ ಪರಿಹಾರವಿಲ್ಲ; ಜಯ ಕರ್ನಾಟಕ ಸಂಘಟನೆ ಆರೋಪ
“ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಅನುಮತಿ ಸಿಗುವವರೆಗೂ ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ಮಾಡುತ್ತೇವೆ” ಎಂದು ತುಪ್ಪುರು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
