ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮಂಗಳವಾರ ಭೇಟಿ ನೀಡಿದರು.
ಬಸ್ ನಿಲ್ದಾಣದಲ್ಲಿರುವ ಶೌಚಾಲಯ, ಅಂಗಡಿ ಹಾಗೂ ಹೋಟೆಲ್‌ಗಳ ಶುಚಿತ್ವ ಪರಿಶೀಲನೆ ನಡೆಸುತ್ತಿರುವ ವೇಳೆ ಶೌಚಾಲಯದಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದಕ್ಕೆ ಅಧಿಕಾರಿಗಳ ವಿರುದ್ಧ ಪುಷ್ಪ ಅಮರನಾಥ್ ಕಿಡಿಕಾರಿದ್ದಾರೆ.

ಚಿಕ್ಕಮಗಳೂರು ನಗರದ ಬಸ್ ನಿಲ್ದಾಣದಲ್ಲಿದ್ದ ವಿದ್ಯಾರ್ಥಿನಿಯರು, ಮಹಿಳೆಯರ ಸಮಸ್ಯೆಗಳನ್ನು ಆಲಿಸಿ, ಶಕ್ತಿ ಯೋಜನೆಯ ಕುರಿತು ಪ್ರಯಾಣಿಕರೊಂದಿಗೆ ಅಭಿಪ್ರಾಯ ಸಂಗ್ರಹಿಸುತ್ತಿರುವಾಗ ಮಹಿಳೆಯೊಬ್ಬರು ಆಧಾರ್ ಕಾರ್ಡ್ ಇಲ್ಲ ಎಂದಾಗ, ಗುರುತಿನ ಚೀಟಿ ಇಲ್ಲದೆಯೂ ಪ್ರಯಾಣಿಸಬಹುದೆಂದು ಹೇಳಿದ್ದಾರೆ.
“ಬಸ್ ನಿಲ್ದಾಣದ ಅಂಗಡಿ ವ್ಯಾಪಾರಿಗಳು ಪ್ರಯಾಣಿಕರಿಂದ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಹಣ ಸ್ವೀಕರಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಪುಷ್ಪ ಅಮರನಾಥ್ ತಿಳಿಸಿದರು.
ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು | ಹಿಂದುತ್ವವಾದಿ ಶೋಭಾಯಾತ್ರೆ; ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗಿಲ್ಲ ಪ್ರವೇಶ
“ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಹಾಲುಣಿಸುವ ಕೊಠಡಿಯು ಗೋಡಾನ್ ಆಗಿದ್ದು ಹಾಗೂ ಶೌಚಾಲಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸುತ್ತೇನೆ” ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು.