ಚಿಕ್ಕಮಗಳೂರು l ಶ್ರೀಗಂಧ ಸಾಗಾಟ ಆರೋಪ; ಪತ್ರಕರ್ತ ಸೇರಿ ಇಬ್ಬರ ಬಂಧನ

Date:

ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಂಡುಗುಳಿ ಸಮೀಪದ ನವಗ್ರಾಮದ ವಲಯ ಅರಣ್ಯದಲ್ಲಿ ನಡೆದಿದೆ.

- Advertisement -

ಪ್ರೆಸ್’ ಎಂದು ಬರೆಸಿದ್ದ ಬೈಕ್‌ನಲ್ಲಿ ಶ್ರೀಗಂಧವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಆರೋಪಿಗಳಾದ ಹಾಸನದಿಂದ ಪ್ರಕಟವಾಗುವ ಸ್ಥಳೀಯ ಪತ್ರಿಕೆಯ ವರದಿಗಾರ ಹಂಡಗುಳಿ ಮೂಲದ, ಪಟ್ಟಣ ನಿವಾಸಿ ಪತ್ರಕರ್ತ ಎಚ್.ಆರ್.ಮನ್ಸೂರ್ ಹಾಗೂ ಹ್ಯಾಂಡ್ ಪೋಸ್ಟ್ ಬಳಿಯ ನಿವಾಸಿ ಎಂ.ಕೆ. ಯೂಸೂಫ್ ಬಂಧಿತರು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಶ್ರೀಗಂಧ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ, ಮೂಡಿಗೆರೆ ಶಾಖೆ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಸುಜುಕಿ ಕಂಪನಿಯ ಮೋಟಾರ್ ಬೈಕ್ (ನಂ:KA-18-ED-5486) ನಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿರುವಾಗ ಬೈಕನ್ನು ಬೆನ್ನಟ್ಟಿ ಹಿಡಿದು ಪರಿಶೀಲಿಸಿದಾಗ, ಶ್ರೀಗಂಧದ 8 ತುಂಡುಗಳು ಪತ್ತೆಯಾಗಿದವು. ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಶ್ರೀಗಂಧವನ್ನೂ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಆರೋಪಿಗಳನ್ನು ಗುರುವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕ್ರೇನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಮಹಿಳೆ ಸಾವು

ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಜಿ.ಮಂಜುನಾಥ್, ಡಿಆರ್‌ಎಫ್‌ಒ ಅಶ್ವತ್ಥ್‌, ಸಿಬ್ಬಂದಿ ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ಸುಮಂತ್ ನವರಾಜ್, ಭಾಗವಹಿಸಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರೆಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...