ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

Date:

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ ಮೀರಿ ಹೋಗಿದೆ. ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದಲ್ಲಿ ಒಂಟಿ ಆನೆಯೊಂದು ಪದೇ ಪದೇ ಉಪಟಳ ನೀಡುತ್ತಿದ್ದು ಫಸಲಿಗೆ ಬಂದ ಅಡಿಕೆ, ಕಾಫಿ, ತೆಂಗಿನ ಮರ ಬಾಳೆ ಗಿಡಗಳನ್ನು ಮುರಿದು ಹಾಕುತ್ತಿದೆ.

- Advertisement -

ಚಿಕ್ಕಮಗಳೂರು ತಾಲೂಕು ಆವತಿ ಹೋಬಳಿ ಐದಳ್ಳಿ ಗ್ರಾಮದಲ್ಲಿ ಅರುಣ್ ಕುಮಾರ್, ಮಂಜುನಾಥ್, ಲೋಕೇಶ್, ರುದ್ರೇಗೌಡ ಇವರ ತೋಟದಲ್ಲಿ ಬಾಳೆ, ತೆಂಗು, ಅಡಿಕೆ, ಕಾಫಿ ಬೆಳೆ ನಾಶ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಸುತ್ತಮುತ್ತಲ ಪ್ರದೇಶದಲ್ಲಿ ಕಳೆದ ಹಲವು ತಿಂಗಳುಗಳಿಂದ ಓಡಾಟ ನಡೆಸುತ್ತಿರುವ ಈ ಆನೆಯ ಉಪಟಳಕ್ಕೆ ಜನ ಬೇಸತ್ತು ಹೋಗಿದ್ದಾರೆ. ಮಲೆನಾಡು ಭಾಗದ ಗದ್ದೆಗಳಲ್ಲಿ ಭತ್ತದ ನಾಟಿ ಕಾರ್ಯವು ಆರಂಭಗೊಂಡಿದ್ದು ಈ ರೀತಿ ಆನೆಗಳು ಉಪಟಳ ನೀಡುತ್ತಿರುವುದರಿಂದ ಕಾರ್ಮಿಕರು ಕೃಷಿ ಚಟುವಟಿಕೆಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ, ಆಲ್ದೂರು ಅರಣ್ಯ ವ್ಯಾಪ್ತಿಯಲ್ಲಿನ ಹಲವು ಗ್ರಾಮಗಳಲ್ಲಿ ಆನೆಗಳು ಬೆಳೆ ಹಾನಿ ಮಾಡುತ್ತಿದೆ.

ಈ ಕಾಡಾನೆಗಳು ಇತ್ತೀಚಿಗೆ ಐದಳ್ಳಿ ಗ್ರಾಮದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರತೀ ದಿನ ಒಬ್ಬೊಬ್ಬರ ಮನೆಯ ತೋಟಕ್ಕೆ ರಾತ್ರಿಯ ವೇಳೆ ದಾಳಿ ಮಾಡುತ್ತಿದೆ. ಅಲ್ಲದೇ, ಬಾಳೆ, ತೆಂಗು, ಅಡಿಕೆ, ಕಾಫಿ ಸೇರಿದಂತೆ ರೈತರು ಬೆಳೆದಿರುವ ಬೆಳೆಗಳನ್ನು ನಾಶ ಮಾಡಿದೆ.

ಈ ಬಗ್ಗೆ ಈದಿನ ಡಾಟ್‌ ಕಾಮ್‌ ಜೊತೆಗೆ ಮಾತನಾಡಿರುವ ಯುವ ರೈತ ಸನ್ಮಿತ್ ಐದಳ್ಳಿ, “ನಮ್ಮ ಐದಳ್ಳಿ ಗ್ರಾಮದಲ್ಲಿ ನಿರಂತರವಾಗಿ ಕಾಡಾನೆಗಳು ದಾಳಿ ಮಾಡುತ್ತಿದೆ. ರಾತ್ರಿ ವೇಳೆಯಲ್ಲೇ ದಾಳಿ ಮಾಡುತ್ತಿದೆ. ಈ ಬಗ್ಗೆ ಆಲ್ದೂರು ಭಾಗದಲ್ಲಿರುವ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದ್ರೆ, ಬೆಳಗ್ಗೆ ಅಧಿಕಾರಿಗಳನ್ನು ಕಳುಹಿಸ್ತೀವಿ ಅಂತ ತಿಳಿಸ್ತಾರೆ. ರಾತ್ರಿ ಎಲ್ಲ ಆನೆಗಳು ದಾಳಿ ಮಾಡಿ, ಬೆಳೆಗಳನ್ನೆಲ್ಲ ನಾಶ ಮಾಡಿ ಹೋದ ನಂತರ ಕಳುಹಿಸಿ ಏನು ಪ್ರಯೋಜನ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ckm 3

“ರಾತ್ರಿ ವೇಳೆ ಕಳುಹಿಸಿದರೆ ಆನೆಯನ್ನು ಓಡಿಸಬಹುದು. ರಾತ್ರಿಯೇ ಅಧಿಕಾರಿಗಳು ಬರ್ತಾರೆ ಅಂತ ರಸ್ತೆಯಲ್ಲಿ ಕಾದರೂ ಕೂಡ ಬರುವುದಿಲ್ಲ. ರಾತ್ರಿ ಫೋನ್ ಮಾಡಿದಾಗ ಬನ್ನೂರು ಗ್ರಾಮದಲ್ಲಿ ಕೂಡ ಆನೆ ಬಂದಿದೆ. ಅಲ್ಲಿಗೆ ಅಧಿಕಾರಿಗಳು ಹೋಗಿದ್ದಾರೆ ಅಂತ ತಿಳಿಸ್ತಾರೆ. ಹಾಗಾದ್ರೆ, ಐದಳ್ಳಿಯಲ್ಲಿರುವ ರೈತರು ಏನು ಮಾಡಬೇಕು? ಕಾಡಾನೆಗಳು ಬಹಳ ದಿನದಿಂದ ದಾಳಿ ಮಾಡ್ತಾ ಇದೆ ಎಂದು ತಿಳಿಸಿದ್ದರೂ ಕೂಡ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನ ವಹಿಸುತ್ತಿಲ್ಲ. ಇದೇ ರೀತಿಯಾದಲ್ಲಿ ಗ್ರಾಮಸ್ಥರೆಲ್ಲ ಸೇರಿ ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಡಾನೆಗಳ ದಾಳಿಯಿಂದ ಬೇಸತ್ತು ಮಾತನಾಡಿರುವ ಮದನ್ ಐದಳ್ಳಿಯವರು, “ಕಳೆದ ಮೂರು ನಾಲ್ಕು ವರ್ಷಗಳಿಂದ ನಮ್ಮ ಗ್ರಾಮದಲ್ಲಿ ಕಾಡಾನೆಗಳ ದಾಳಿ ವಿಪರೀತಗೊಂಡಿದೆ. ಅರಣ್ಯ ಇಲಾಖೆಯವರು ಏನೂ ಕ್ರಮ ಕೈಗೊಳ್ಳುತ್ತಿಲ್ಲ. ನಾವು ಹೇಳೋದೇ ಆಯ್ತು, ಅವರು ಕೇಳೋದೇ ಆಯ್ತು. ದೂರು ಕೊಟ್ಟಾಗ ಬರ್ತಾರೆ, ಫೋಟೋ ತೆಗೀತಾರೆ, ಬೆಳೆ ನಾಶಕ್ಕೆ ಪರಿಹಾರ ಕೊಡ್ತೀವಿ ಅಂತಾರೆ. ಈವರೆಗೆ ಕಾಡಾನೆ ದಾಳಿಗೂ ಶಾಶ್ವತ ಪರಿಹಾರ ಕೊಟ್ಟಿಲ್ಲ, ಬೆಳೆ ನಾಶಕ್ಕೂ ಪರಿಹಾರ ಕೊಟ್ಟಿಲ್ಲ. ಕೇವಲ ಭರವಸೆಯಲ್ಲೇ ಕಾಲ ಕಳೆಯುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಐದಳ್ಳಿ ಸೇರಿದಂತೆ ಸುತ್ತಮುತ್ತಲಿನ ಕೆಲವು ಗ್ರಾಮಗಳ ರೈತರ ಎಲ್ಲ ಬೆಳೆಗಳು ಸರ್ವನಾಶ ಆಗಿದೆ. ಕಾಡಾನೆಗಳ ದಾಳಿ ಇದೇ ರೀತಿ ಮುಂದುವರಿದರೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಯಾರ ತೋಟವೂ ಉಳಿಯುವುದಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ರಾತ್ರಿ ಊಟ ಮಾಡಿ, ಅಚ್ಚುಕಟ್ಟಾಗಿ ಮಲಗಿರ್ತಾರೆ. ಕೇವಲ ಎರಡು ಇಟಿಎಫ್ ತಂಡ ಮಾಡಿಕೊಂಡು ಸುಮ್ಮನಿದ್ದಾರೆ. ಈ ಸಮಸ್ಯೆ ಬೆಳೆಯುವುದಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳೂ ಕೂಡ ಕಾರಣ. ರಾತ್ರಿ ವೇಳೆ ಸಮಸ್ಯೆಯಾದಾಗ ನಮಗೂ ಕೂಡ ಸ್ಪಂದಿಸಬಹುದಲ್ಲವೇ?ಬೇರೆಯವರಂತೆ ನಾವೂ ಕೂಡ ರೈತರಲ್ಲವೇ? ” ಎಂದು ಅರಣ್ಯ ಇಲಾಖೆಯನ್ನು ರೈತ ಮದನ್ ತರಾಟೆಗೆ ತೆಗೆದುಕೊಂಡಿದ್ದಾರೆ.

image 1 11
ರೈತರಾದ ಸನ್ಮಿತ್ ಐದಳ್ಳಿ ಹಾಗೂ ಮದನ್ ಐದಳ್ಳಿ

“ಜನರ ತೆರಿಗೆಯನ್ನು ಬಳಸಿಕೊಳ್ಳುವ ಅರಣ್ಯ ಇಲಾಖೆಯ ಅಧಿಕಾರಿಗಳು ಐದಳ್ಳಿ ಗ್ರಾಮದ ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ರಾತ್ರಿ ವೇಳೆ ಫೋನ್ ಮಾಡಿ, ಅಲರ್ಟ್‌ ಸಂದೇಶ ಕಳುಹಿಸಿದರೂ ಸರಿಯಾದ ಸ್ಪಂದನೆ ಕೂಡ ನೀಡುತ್ತಿಲ್ಲ. ಕಾಡಾನೆಗಳ ದಾಳಿಯಿಂದ ನಾವು ಕಷ್ಟಪಟ್ಟು ಬೆಳೆಸಿದ ಬೆಳೆಗಳೆಲ್ಲ ನಾಶವಾಗುತ್ತಿದೆ. ಈವರೆಗೆ ಯಾವ ಪರಿಹಾರವೂ ದಕ್ಕಿಲ್ಲ. ಇದು ಇದೇ ರೀತಿ ಮುಂದುವರಿದಲ್ಲಿ ಎಲ್ಲ ರೈತರು ಸೇರಿಕೊಂಡು ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಈ ಸಮಸ್ಯೆಯ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಫೋನ್ ಮಾಡಿದ್ರೆ ಸಿಬ್ಬಂದಿಗಳು ಬೇರೆ ಕಡೆ ಹೋಗಿದ್ದಾರೆ ಅನ್ನುತ್ತಾರೆ. ಬೆಳೆ ಹಾನಿ ಜೊತೆಗೆ ಮನೆಯಿಂದ ಹೊರಗೆ ಬರುವುದೇ ಕಷ್ಟ ಅನ್ನೋ ಪರಿಸ್ಥಿತಿ ಎದುರಾಗಿದೆ . ಎಲ್ಲಾ ಬೆಳೆಗಳು ನಾಶ ಆದರೆ ರೈತರು ಜೀವನ ಮಾಡುವುದು ಹೇಗೆ? ಶಾಸಕರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ದಯವಿಟ್ಟು ಗಮನಹರಿಸಬೇಕು. ಆನೆ ಹಾವಳಿಯಿಂದ ಶಾಶ್ವತ ಪರಿಹಾರ ನೀಡಬೇಕೆಂದು ಐದಳ್ಳಿ ಗ್ರಾಮದ ರೈತರು ಈದಿನ ಡಾಟ್ ಕಾಮ್ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...