ಚಿಕ್ಕಮಗಳೂರು | ಮಾನವ ಪ್ರಕೃತಿಯ ಭಾಗ ಎಂಬುದನ್ನು ಮರೆಯಬಾರದು; ಹರೀಶ್ ಎನ್.ಆರ್

Date:

ಕಳಸ : ಇಂದಿನ ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರಿತ್ಯ ಸೇರಿದಂತೆ ಸಾಕಷ್ಟು ಸಮಸ್ಯೆಗಳಿಗೆ ಮೂಲ ಕಾರಣವೇ ಮಾನವನ ಅತಿಯಾಸೆ. ತನ್ನ ಆಸೆಗಳಿಗೆ ಪರಿಸರ ನಾಶ, ವನ್ಯಜೀವಿಗಳಿಗೆ ಹಾನಿ ಮಾಡುವ ಮುನ್ನ ಪ್ರಕೃತಿ ಮಾನವನ ಭಾಗವಲ್ಲ, ಮಾನವ ಈ ಪ್ರಕೃತಿಯ ಭಾಗ ಎಂಬುದನ್ನು ಮರೆಯಬಾರದು ಎಂದು ಕಳಸ ಉಪವಲಯ ಅರಣ್ಯಾಧಿಕಾರಿ ಹರೀಶ್.ಎನ್.ಆರ್ ತಿಳಿಸಿದರು. 

- Advertisement -

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಾನವ – ವನ್ಯಜೀವಿ ಸಂಘರ್ಷ ಪ್ರಕರಣಗಳಲ್ಲಿ ಪ್ರಾಣಿಗಳು ನಾಡಿನತ್ತ ಸ್ವಲ್ಪ ಕಾಣಿಸಿಕೊಂಡರು ದೊಡ್ಡ ಅಪರಾಧವೆಂಬಂತೆ ಕೂಗಾಡುವ ಮನುಷ್ಯ ಅದೇ ಪ್ರಾಣಿಗಳ ಮನೆಯಾದ ಕಾಡನ್ನು ಹೊಕ್ಕು ಸಂಪೂರ್ಣ ನಾಶಪಡಿಸುತ್ತಿರುವುದನ್ನು ಮರೆಯಬಾರದು ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಕಳಸ ವಲಯ ಅರಣ್ಯಾಧಿಕಾರಿ ಗೌರವ್ ಮಾತನಾಡಿ, ಮಲೆನಾಡು ಭಾಗದ ವಿದ್ಯಾರ್ಥಿಗಳಾದ ನೀವು ಇಲ್ಲಿನ ಪ್ರಕೃತಿ ಸೌಂದರ್ಯದ ಜೊತೆ ಅದರ ಮಹತ್ವವನ್ನು ಅರಿಯಬೇಕು. ಸಸಿ, ಮರಗಳು ಅವುಗಳ ವಿಶೇಷತೆಗಳ ಬಗ್ಗೆ ಹಿರಿಯರಿಂದ ಕೇಳಿ ತಿಳಿದುಕೊಳ್ಳಿ ಮತ್ತು ಈ ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಯ ಕುರಿತು ನಿಮ್ಮ ಸುತ್ತ ಮುತ್ತಲಿನ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದರು. ಬಾಳೆಹೊನ್ನೂರು ಆನೆ ಕಾರ್ಯಪಡೆ ಉಪವಲಯ ಅರಣ್ಯಾಧಿಕಾರಿ ಚಂದ್ರಪ್ಪ ಮಾತನಾಡಿ, ಮಾನವ – ವನ್ಯಜೀವಿ ಸಂಘರ್ಷಗಳಲ್ಲಿ ಜನರು ಕೇವಲ ಅರಣ್ಯ ಇಲಾಖೆಯನ್ನು ದೂಷಿಸುವುದರಲ್ಲೇ ನಿರತರಾಗುತ್ತಾರೆ ಹೊರತು ತಮ್ಮಿಂದ ಆಗಬಹುದಾದ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವುದನ್ನ ಮರೆಯುತ್ತಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ವಿಶುಕುಮಾರ್.ಎನ್ ಮಾತನಾಡಿ  ಪ್ರಕೃತಿ ನಮ್ಮೆಲ್ಲರ ಸಂಪತ್ತು, ಅದನ್ನು ಜಾಗ್ರತೆಯಿಂದ ಕಾಪಾಡಿಕೊಳ್ಳುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು, ಆದಷ್ಟು ವನ್ಯಜೀವಿಗಳು ಮತ್ತು ಕಾಡಿನ ಬಗ್ಗೆ ಹೆಚ್ಚಿನ ವಿಚಾರಗಳನ್ನು ತಿಳಿದುಕೊಂಡು ಇನ್ನಷ್ಟು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಡ್ರೋನ್ ಬಳಕೆ ಬಗ್ಗೆ ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕೆರೆಗೆ ಈಜಲು ಹೋದ ಮಕ್ಕಳು ನೀರು ಪಾಲು 

ಕಾರ್ಯಕ್ರಮದಲ್ಲಿ ಕಳಸದ ಉರಗ ತಜ್ಞ ಮಹಮ್ಮದ್ ರಿಜ್ವಾನ್, ಎನ್.ಎಸ್.ಎಸ್ ಘಟಕ-1ರ ಕಾರ್ಯಕ್ರಮಾಧಿಕಾರಿ ಡಾ.ಪುನೀತ್ ಕುಮಾರ್. ಕೆ.ಆರ್, ಎನ್.ಎಸ್.ಎಸ್ ಘಟಕ-2ರ ಕಾರ್ಯಕ್ರಮಾಧಿಕಾರಿ ಡಾ.ಆದಿತ್ಯ ಅಡಿಗ.ಎ.ಜಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...