ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರಿನ ನಿರ್ವಾಹಕ ಶ್ರೀನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಕಾರಣವೆಂದು ಆರೋಪಿಸಿ ದಲಿತಪರ ಸಂಘಟನೆಯಿಂದ ಚಿಕ್ಕಮಗಳೂರು ನಗರದ ವಿಭಾಗೀಯ ನಿಯಂತ್ರಣಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

“ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರಿನ ನಿರ್ವಾಹಕ ಶ್ರೀನಾಥ್ ಅವರು ಅಪಘಾತದಲ್ಲಿ ಸಾವನಪ್ಪಿರುವುದಕ್ಕೆ ಡಿಪೋ ಮ್ಯಾನೇಜರ್ ಬೇಬಿಬಾಯಿ ಹಾಗೂ ಮೆಕ್ಯಾನಿಕ್ ವಿಭಾಗದ ಮುಖ್ಯಸ್ಥ ಪರಮೇಶ್ವರಪ್ಪ ಅವರ ಕರ್ತವ್ಯ ಲೋಪವೇ ಕಾರಣವಾಗಿದ್ದು, ಇಬ್ಬರನ್ನು ಅಮಾನತುಗೊಳಿಸುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ” ಎಂದು ದಸಂಸ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ವಿಶ್ವ ಸ್ವಯಂ ಸೇವಕರ ದಿನಾಚರಣೆ
ದಸಂಸ ವತಿಯಿಂದ ಪ್ರತಿಭಟನೆ ನಡೆಸುತ್ತಿರುವುದು ಗಮನಕ್ಕೆ ಬಂದ ಕೂಡಲೇ ಚಿಕ್ಕಮಗಳೂರು ಕ್ಷೇತ್ರದ ಶಾಸಕ ತಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ, “ನಿರ್ವಾಹಕ ಶ್ರೀನಾಥ್ ಸಾವಿಗೆ ಕಾರಣರಾದ ಅಧಿಕಾರಿಯನ್ನು ಅಮಾನತು ಮಾಡಿಸುತ್ತೇನೆ” ಎಂದು ಭರವಸೆ ನೀಡಿದ್ದಾರೆ ಎಂದು ದಸಂಸ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ಈ ದಿನ.ಕಾಮ್‌ಗೆ ಮಾಹಿತಿ ತಿಳಿಸಿದ್ದಾರೆ.
ಈ ವೇಳೆ ಪ್ರತಿಭಟನೆಯಲ್ಲಿ ದಸಂಸ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಇದ್ದರು.