ಚಿಕ್ಕಮಗಳೂರು | ಕಾಂಗ್ರೆಸ್​ ಶಾಸಕರ ವಿರುದ್ಧ ವಾಟ್ಸಪ್‌​ ಸ್ಟೇಟಸ್; ಮಹಿಳಾ ಪೇದೆ ಅಮಾನತು

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆ ಎಸ್ ಆನಂದ್​ ವಿರುದ್ಧ ವಾಟ್ಸಪ್‌​ ಸ್ಟೇಟಸ್​ ಹಾಕಿ ಆಕ್ರೋಶ ಹೊರಹಾಕಿದ ಮಹಿಳಾ ಪೇದೆ(ಕಾನ್ಸ್​ಟೆಬಲ್)ಯೊಬ್ಬರನ್ನು ಅಮಾನತು ಮಾಡಲಾಡಿದೆ.

“ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ. ನನಗೆ ಏನಾದರು ತೊಂದರೆ ಆದರೆ ಅದಕ್ಕೆ ಶಾಸಕರೇ ಕಾರಣ” ಎಂದು ಮಹಿಳಾ ಪೇದೆ ಲತಾ ಎಂಬುವರು ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಇದಕ್ಕೆ ಸಂಬಂಧಿಸಿದ ಸ್ಕ್ರೀನ್​ಶಾಟ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.

ಲತಾ ಅವರು ಕಡೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕಡೂರಿನಿಂದ ತರೀಕೆರೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಲತಾ, ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ವರ್ಗಾವಣೆ ವಿರೋಧಿಸಿ ಸಬ್​ ಇನ್ಸ್​ಪೆಕ್ಟರ್ ಜತೆಯೂ ಲತಾ ಮಾತಿನ ಚಕಮಕಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಒಳಜಗಳ | ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನಹಾನಿ ಕೇಸ್ : ಸಚಿವ ಭಗವಂತ ಖೂಬಾ

ಲತಾ ಅವರ ಈ ವರ್ತನೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್​ ಅವರ ಗಮನಕ್ಕೆ ಬಂದಿದ್ದು, ಮಹಿಳಾ ಪೊಲೀಸ್‌ ಪೇದೆ ಲತಾ ಅವರನ್ನು ಅಮಾನತು ಮಾಡಿ ಎಸ್‌ಪಿ ಆದೇಶ ಹೊರಡಿಸಿದ್ದಾರೆ.

“ಚುನಾವಣೆ ಸಂದರ್ಭದಲ್ಲಿ ಹೆಲ್ಮೆಟ್​ ಧರಿಸಿದೇ ಓಡಾದಿದ್ದಕ್ಕೆ ಕಾಂಗ್ರೆಸ್​ ಕಾರ್ಯಕರ್ತರಿಗೆ ಲತಾ ಅವರು ದಂಡ ವಿಧಿಸಿದ್ದರು. ಇದೇ ವಿಚಾರವಾಗಿ ಆನಂದ್​ ಅವರು ಪೇದೆ ಜತೆ ಮಾತಿನ ಚಕಮಕಿ ನಡೆಸಿದ್ದ ವಿಡಿಯೋ ಈ ಹಿಂದೆ ವೈರಲ್​ ಆಗಿತ್ತು. ಇದೇ ದ್ವೇಷಕ್ಕೆ ವರ್ಗಾವಣೆ ಮಾಡಿಸಿದ್ದಾರೆ” ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬೀದಿ ಬದಿ ವ್ಯಾಪಾರಿಗಳ ಮೇಲೆ ಅಧಿಕಾರಿಗಳ ದರ್ಪ; ಬದುಕು ಬೀದಿ ಪಾಲು

ಶಿಲ್ಪಕಲೆಗಳ ತವರೂರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ, ಚನ್ನಕೇಶವನ ನಾಡು ವಗೈರೆ...

ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12...

ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ...

ವಂಚನೆ, ಜೀವ ಬೆದರಿಕೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆ‌ರ್

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ...