ಚಿಕ್ಕನಾಯಕನಹಳ್ಳಿ | ಲೇಖನಿಯನ್ನು ಪರಿಣಾಮಕಾರಿಯಾಗಿ ಬಳಸಿ ದೇಶ ಮುನ್ನಡೆಸಿದ ಡಾ.ಸಿಂಗ್: ಮಾಜಿ ಶಾಸಕ ಕೆ ಎಸ್ ಕಿರಣಕುಮಾರ್

Date:

ಲೇಖನಿಯನ್ನು ಪರಿಣಾಮಕಾರಿಯಾಗಿ ಬಳಸಿ ದೇಶವನ್ನು ಮುನ್ನಡೆಸಿದ ಅಪ್ರತಿಮ ಪ್ರಧಾನಿ, ಮಹಾತ್ಮಗಾಂಧಿ ನರೇಗಾ ಕ್ರಾಂತಿಯ ಮೂಲಕ ಬಡವರ ಒಡಲಿಗೆ ಅನ್ನ ಕಲ್ಪಿಸಿಕೊಟ್ಟ ಜ್ಞಾನಮೌನಿ ಡಾ. ಮನಮೋಹನ್ ಸಿಂಗ್ ಎಂದು ಮಾಜಿ ಶಾಸಕ ಕೆ ಎಸ್ ಕಿರಣ ಕುಮಾರ್ ಸ್ಮರಿಸಿದರು.

- Advertisement -

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಶ್ರದ್ಧಾಂಜಲಿ ಸಭೆಯಲ್ಲಿ ಅವರ ಗೌರವಾರ್ಥ ಎರಡು ನಿಮಿಷಗಳ ಮೌನಾಚರಣೆ ಮಾಡಿ, ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಅಬ್ಬರದ ಭಾಷಣ ಮಾಡುವವರು ಮಾತ್ರವೇ ದೇಶದ ನಾಯಕರಲ್ಲ. ತಮ್ಮ ಬಳಿಯಿರುವ ಲೇಖನಿಯ ಪರಿಣಾಮಕಾರಿ ಸದ್ಬಳಕೆಯಿಂದ ದೇಶ ಮುನ್ನಡೆಸುವ ಸಾಮರ್ಥ್ಯ ಹೊಂದಿದವರೇ ನಿಜವಾದ ಜನನಾಯಕರು. ಹಳಿ ತಪ್ಪಿದ್ದ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿ ಮತ್ತೆ ಆರ್ಥಿಕ ಪ್ರಗತಿಯ ಗತಿಶೀಲತೆಯನ್ನು ತಂದುಕೊಟ್ಟಂಥವರು ಡಾ. ಮನಮೋಹನ್ ಸಿಂಗ್’. ಅವರು ಪ್ರಧಾನಿಯಾಗಿದ್ದಾಗ, ಹೊರಗೆ ಅಡಮಾನ ಇಟ್ಟಿದ್ದ ದೇಶದ ಚಿನ್ನವನ್ನು ಮತ್ತೆ ದೇಶಕ್ಕೆ ಮರಳಿ ಗಳಿಸಿಕೊಟ್ಟರು. ಪ್ರಪ್ರಥಮವಾಗಿ ₹71 ಸಾವಿರ ಕೋಟಿಗಳಷ್ಟು ರೈತರ ಸಾಲಮನ್ನಾ ಮಾಡಿದ ಮೌನದಿರಿಸಿನ ಧೀರ ವ್ಯಕ್ತಿತ್ವ ಡಾ ಮನಮೋಹನ್ ಸಿಂಗ್’ರವರದು. ಅಬ್ಬರದ ಭಾಷಣ ಮಾಡುತ್ತ, ಜನರನ್ನು ಮರುಳು ಮಾಡುತ್ತ ಕಾಲತಳ್ಳುವ ವ್ಯಕ್ತಿ ಅವರಾಗಿರಲಿಲ್ಲ. ಮಾತಾಡದೇ ಕೆಲಸ ಮಾಡುತ್ತ ದೇಶದ ಜನರ ಬದುಕು-ಭವಿಷ್ಯ ಎರಡನ್ನೂ ಸುಭದ್ರಗೊಳಿಸಲು ಅವಿರತ ಪ್ರಯತ್ನಿಸುತ್ತಿದ್ದವರು. ಅವರ ನಿಧನದಿಂದ ದೇಶ ನಿಜಕ್ಕೂ ಇಂದು ಬಡವಾಗಿದೆ” ಎಂದು ವಿಷಾದಿಸಿದರು.

ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ ಡಿ ಚಂದ್ರಶೇಖರ್ ಮಾತನಾಡಿ, “ಗ್ರಾಮೀಣ ಪ್ರದೇಶದ ಆರೋಗ್ಯ ಮಟ್ಟವನ್ನು ಸುಧಾರಿಸಲು ರಾಷ್ಟ್ರೀಯ ಆರೋಗ್ಯ ಮಿಷನ್ ಜಾರಿಗೆ ತಂದಂತಹ ಮಹಾವ್ಯಕ್ತಿ ಡಾ ಮನಮೋಹನ್ ಸಿಂಗ್. ಜನ-ಸಾಮಾನ್ಯರ ಕೈಗೆ ಅಸಾಮಾನ್ಯ ಬಲ ತಂದುಕೊಟ್ಟಂತಹ ಮಾಹಿತಿ ಹಕ್ಕು ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆಗಳನ್ನು ದೇಶಕ್ಕೆ ಕೊಟ್ಟ ಶ್ರೇಯಸ್ಸು ಡಾ ಸಿಂಗ್’ ಅವರದ್ದು. ಬಡವರಿಗಾಗಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಜಾರಿಗೆ ತಂದು, ವರ್ಷವಿಡೀ ಯಾರಿಗೂ ಅನ್ನಾಹಾರಗಳ ಕೊರತೆ ಎದುರಾಗದಂತೆ ಕಾಳಜಿ ವಹಿಸಿದ್ದರು. ತಮ್ಮ ಅಧಿಕಾರಾವಧಿಯ ಹತ್ತು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಅವರೊಬ್ಬ ಮಹಾನ್ ಆರ್ಥಿಕ ತಜ್ಞರಾಗಿದ್ದರು” ಎಂದು ನೆನಪಿಸಿಕೊಂಡರು.

WhatsApp Image 2024 12 27 at 7.25.12 PM

“ಮಾರುತಿ ಕಾರು ಎಂದರೆ, ಅವರಿಗೆ ಅತಿಯಾದ ಪ್ರೀತಿ. ಆಗೆಲ್ಲ ಕೇವಲ ಮಾರುತಿ ಕಾರು ಮಾತ್ರ ಕಾಣಿಸುತ್ತಿದ್ದ ಇಂಡಿಯಾದ ರಸ್ತೆಗಳಲ್ಲಿ, ನೂರಾರು ಮಾದರಿಯ ಬೇರೆ ಬೇರೆ ಕಾರುಗಳೂ ಕಾಣುವಷ್ಟರ ಮಟ್ಟಿಗೆ, ದೇಶದ ವಾಹನ ಉತ್ಪಾದನಾ ಕ್ಷೇತ್ರಕ್ಕೂ ಒತ್ತು ಕೊಟ್ಟವರು. ಕಂಪ್ಯೂಟರ್‌, ಮೊಬೈಲ್, ಟ್ಯಾಬ್‌ ಇತ್ಯಾದಿ ಗ್ಯಾಜೆಟ್‌ಗಳು ದೇಶದ ಜನರಿಗೆ ಸುಲಭ ದರಗಳಲ್ಲಿ ದೊರೆಯುವಂತೆ ಮಾಡಿದ್ದ ಆರ್ಥಿಕ ಕ್ಷೇತ್ರದ ಅಪರೂಪದ ಸಾಧಕ. ಇಡೀ ವಿಶ್ವವೇ ಆರ್ಥಿಕ ಹಿಂಜರಿತಕ್ಕೆ ಸಿಲುಕಿ ನಲುಗುತ್ತಿದ್ದಾಗ, ಆ ಎಲ್ಲ ಆರ್ಥಿಕ ಸಂಕಟಗಳಿಗೆ ದೇಶ ಬಲಿಯಾಗದಂತೆ ಎಚ್ಚರವಹಿಸಿ ಭಾರತವನ್ನು ಕಾಪಾಡಿಕೊಂಡ ಮೌನ ಕ್ರಾಂತಿಕಾರ. ದೇಶದ ಜನರಿಗೆ ಸುಗಮವಾಗಿ ಸಕಾಲದಲ್ಲಿ ಸೇವೆಗಳನ್ನು ಒದಗಿಸಿಕೊಡುವ ಉದ್ದೇಶದಿಂದ ಆಧಾರ್ ಕಾರ್ಡ್ ತಂದ ಪ್ರವರ್ತಕರು. ಅವರನ್ನು ಮೌನಿ ಮೌನಿ ಎಂದು ಮೂದಲಿಸಿ ಜರೆಯುತ್ತಿದ್ದ ವಿರೋಧಿಗಳೂ ಕೂಡ ಇಂದು, ಡಾ. ಸಿಂಗ್ ಸಾಹೇಬರು, ದೇಶಕ್ಕೆ ನೀಡಿರುವ ಅತ್ಯಮೂಲ್ಯ ಕೊಡುಗೆಗಳನ್ನು ಎಣಿಸುತ್ತ ಕೂತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶದ ಅಪ್ರತಿಮ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

ಹುಳಿಯಾರ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ ಟಿ‌ ಚಿಕ್ಕಣ್ಣ, ರಾಜ್ಯ ಸೇವಾದಳದ ಕಾರ್ಯದರ್ಶಿ ಕೆ ಜಿ ಕೃಷ್ಣೆಗೌಡ, ಬಗರ್ ಹುಕುಂ ಸಮಿತಿ ಸದಸ್ಯ ಬೇವಿನಹಳ್ಳಿ ಚನ್ನಬಸವಯ್ಯ, ಪುರಸಭೆ ಸದಸ್ಯ ಸುಗಂಧರಾಜು, ಕೆಂಪಮ್ಮ, ಪುರಸಭೆ ಆಶ್ರಯ ಸಮಿತಿ ಸದಸ್ಯ ಸಿ ಕೆ ಪೀರ್ ಪಾಷಾ, ಸೇವಾದಳ ಅಧ್ಯಕ್ಷರಾದ ಗೋವಿಂದರಾಜು, ಸಣ್ಣತಾಯಮ್ಮ, ಜಾಣೆಹಾರ್ ಬಸವರಾಜ್, ಕೆಡಿಪಿ ಸದಸ್ಯ ರಾಮಚಂದ್ರಯ್ಯ, ಗ್ಯಾರಂಟಿ ಸಮಿತಿ ಸದಸ್ಯರಾದ ರೇಣುಕಾಸ್ವಾಮಿ, ಚಂದ್ರಯ್ಯ, ಓಂಕಾರಮೂರ್ತಿ, ಸಿದ್ದರಾಮಯ್ಯ, ಅಗಸರಹಳ್ಳಿ ನರಸಿಂಮೂರ್ತಿ, ಸೇವಾದಳದ ಮಾಜಿ ಜಿಲ್ಲಾಧ್ಯಕ್ಷ ನಿಶಾನಿ ಕಿರಣ್, ರಾಜು ಕರಿಯಪ್ಪ, ನೀಲಕಂಠಯ್ಯ, ದರ್ಘಾ ಜಾವೇದ್, ಚಿ ನಾ ಹಳ್ಳಿ ಜ಼ಾಕಿರ್ ಹುಸೇನ್, ಹೊನ್ನೇಬಾಗಿ ಜಾಫರ್, ಪ್ರಸನ್ನಕುಮಾರ್ ಸೇರಿದಂತೆ ಬಹುತೇಕರು ಇದ್ದರು.

ವರದಿ : ಸಂಚಲನ, ಚಿಕ್ಕನಾಯಕನ ಸೀಮೆಯಿಂದ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...