ಚಿಕ್ಕನಾಯಕನಹಳ್ಳಿ | ದಲಿತ ಕೇರಿಗಳಲ್ಲೂ ಸಭೆ ನಡೆಸಲು ಮುಖಂಡರ ಮನವಿ

Date:

ಪ್ರಸ್ತುತ SC/ST ಕುಂದುಕೊರತೆಗಳ ಸಭೆಗಳು ಕಚೇರಿಗಳಲ್ಲಿಯೇ ನಡೆಯುತ್ತಿರುವುದರಿಂದ ದಲಿತ ಸಮುದಾಯದ ನೈಜ ಸಮಸ್ಯೆಗಳು ಬೆಳಕಿಗೆ ಬಾರದೇ ಉಳಿಯುತ್ತಿವೆ. ಹಾಗಾಗಿ ಸಮುದಾಯಗಳ ಸಮಸ್ಯೆ ಬಗೆಹರಿಸಲು ದಲಿತ ಕೇರಿಗಳಲ್ಲೂ ಸಭೆ ನಡೆಸಬೇಕು ಎಂದು ಚಿಕ್ಕನಾಯಕನಹಳ್ಳಿ ಠಾಣಾ ಸಬ್‌ ಇನ್ಸ್‌ಪೆಕ್ಟರ್ ಯತೀಶ್ ಅವರಿಗೆ ಮನವಿ ಮಾಡಿದರು.

- Advertisement -

ನಗರದ ಪೊಲೀಸ್ ಠಾಣೆಯಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದವರ ಕುಂದುಕೊರತೆಗಳ ಸಭೆಯಲ್ಲಿ ಹಲವು ದಲಿತ ಸಂಘಟನೆಗಳ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಜಾತಿ ತಾರತಮ್ಯ, ದೇವದಾಸಿ ಪದ್ಧತಿ ಮತ್ತು ಸಾಮಾಜಿಕ ಅಸಮಾನತೆ, ಶಿಕ್ಷಣದಿಂದ ಹೊರಗುಳಿಯುತ್ತಿರುವ ದಲಿತ ಮಕ್ಕಳು ಹಾಗೂ ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು, ಹಳ್ಳಿಗಳಲ್ಲಿ ಅಕ್ರಮ ಮದ್ಯ ಹಾಗೂ ಗಾಂಜಾ ಚಟುವಟಿಕೆಗಳ ಹೆಚ್ಚಳ, ದುಶ್ಚಟಗಳಿಗೆ ದಲಿತ ಮಕ್ಕಳು ಬಲಿಯಾಗುತ್ತಿರುವುದು, ದಲಿತ ಹೆಣ್ಣುಮಕ್ಕಳ ಮೇಲಿನ ಹಿಂಸಾಚಾರ ಮತ್ತು ಪೋಕ್ಸೋ ಪ್ರಕರಣಗಳ ಏರಿಕೆ, ಮೈಕ್ರೋಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿಯಿಂದ ದಲಿತ ಕುಟುಂಬಗಳ ಮೇಲೆ ದಬ್ಬಾಳಿಕೆ, ವಾರದ ಬಡ್ಡಿ ಮತ್ತು ಕಿರುಕುಳದ ಘಟನೆಗಳು ದಿನೇ ದಿನೇ ಹೆಚ್ಚಾಗುತ್ತಿರುವುದು, ಪೊಲೀಸ್ ಇಲಾಖೆಯ ಮೇಲಿನ ಭಯ ಹಾಗೂ ಅವಿಶ್ವಾಸ, ದೂರು ದಾಖಲಿಸುವಲ್ಲಿ ವಿಳಂಬ ಮತ್ತು ರಾಜಿ ಸಂಧಾನದ ಒತ್ತಾಯ, ಹಳ್ಳಿಗಳಲ್ಲಿ ಗಸ್ತು ವ್ಯವಸ್ಥೆಯ ದುರ್ಬಲತೆ, ಜೂಜು, ಮಟ್ಕಾ, ಈಸ್ಪಿಟ್ ಚಟುವಟಿಕೆಗಳು ಹೆಚ್ಚಾಗಿರುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕರಾದ ಲಿಂಗದೇವರು ಅವರು “ಈ ಎಲ್ಲ ಸಮಸ್ಯೆಗಳ ಮೂಲ ಜನರೊಂದಿಗೆ ನೇರ ಸಂವಾದ ಮತ್ತು ಅರಿವು ಕೊರತೆಯಲ್ಲಿದೆ. ಹೀಗಾಗಿ ದಲಿತ ಕೇರಿಗಳಲ್ಲೇ ಸಭೆಗಳನ್ನು ನಡೆಸಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ಇದನ್ನೂ ಓದಿ: ತುಮಕೂರು | ರಾಜಣ್ಣರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಿ: ಜಿ ಎನ್‌ ಮೂರ್ತಿ

ಜೈ ಭೀಮ್ ಛಲವಾದಿ ಮಹಾಸಭಾ ತಾಲ್ಲೂಕು ಸಂಚಾಲಕ ಆನಂದ್ ಆಶ್ರಿಹಾಳ್ ಮಾತನಾಡಿ, “ಅಸ್ಪೃಶ್ಯತೆ ಆಚರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ದಲಿತರಿಗೆ ಮುಕ್ತ ಪ್ರವೇಶ ಸಿಗುತ್ತಿಲ್ಲ. ದಲಿತರ ಹಕ್ಕುಗಳ ಕುರಿತು ಸ್ಥಳದಲ್ಲೇ ಸಭೆಗಳು ನಡೆಯಬೇಕು” ಎಂದು ಒತ್ತಾಯಿಸಿದರು.

DSS ತಾಲ್ಲೂಕು ಸಂಚಾಲಕರ ಯರೆಕಟ್ಟೆ ರಮೇಶ್ ಮಾತನಾಡಿ, “ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯವನ್ನು ತೀವ್ರವಾಗಿ ವಿರೋಧಿಸುತ್ತೇವೆ. ಈ ಸಂಸ್ಥೆಗಳು RBI ನಿಯಮಗಳನ್ನು ಗಾಳಿಗೆ ತೂರಿ ಮಹಿಳೆಯರ ಮೇಲೆ ಕಿರುಕುಳ, ಅವಮಾನ, ವಾರದ ಬಡ್ಡಿ ಸಂಗ್ರಹವನ್ನು ಮುಂದುವರಿಸುತ್ತಿವೆ. ಧರ್ಮಸ್ಥಳ ಮತ್ತು ಶ್ರೀಶಕ್ತಿ ಸಂಘಗಳು ನಿಯಮ ಪಾಲಿಸಬೇಕು” ಎಂದು ಒತ್ತಾಯಿಸಿದರು.

ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್ ಉಪಾಧ್ಯಕ್ಷ ಗುರುಮೂರ್ತಿ, ಆನಂದ್, ಲೋಕೇಶ್, ಲಿಂಗದೇವರು, ಅಗಸರಹಳ್ಳಿ ನರಸಿಂಹಮೂರ್ತಿ, ಬಸವರಾಜು ಹಾಗೂ ಇತರ ಮುಖಂಡರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಾ | ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ₹5,300 ಕೋಟಿ ತಕ್ಷಣ ಬಿಡುಗಡೆ ಮಾಡಿ : ಮುರಳೀಧರ ಹಾಲಪ್ಪ

 ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಘೋಷಿಸಿರುವ ₹5,300...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...