ಚಿಕ್ಕನಾಯಕನಹಳ್ಳಿ | ಪತ್ರಕರ್ತ ಮಂಜುನಾಥ್ ಮೇಲೆ ಜಾತಿ ನಿಂದನೆ, ಹಲ್ಲೆ ಖಂಡಿಸಿ ಪ್ರಗತಿಪರರಿಂದ ಪ್ರತಿಭಟನೆ

Date:

ಸಹ ವರದಿಗಾರನ ಮೇಲೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮಂಜುನಾಥ್ ತಾಳಮಕ್ಕಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿ ಆತನನ್ನು ಜಿಲ್ಲೆಯಿಂದ ಗಡೀಪಾರು ಮಾಡಬೇಕೆಂದು ಪ್ರಗತಿಪರ ಆಗ್ರಹಿಸಿ ಸಂಘಟನೆಗಳಿಂದ ಚಿಕ್ಕನಾಯಕನಹಳ್ಳಿಯಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು.

- Advertisement -

ಚಿಕ್ಕನಾಯಕನಹಳ್ಳಿಯ ನೆಹರು ಸರ್ಕಲ್‌ನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ಜೀ ಕನ್ನಡ ನ್ಯೂಸ್ ವರದಿಗಾರ ಮಂಜುನಾಥ್ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ನಾಯಕ್ ತಾಳಮಕ್ಕಿ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದಲಿತ ವಿರೋಧಿ, ಕೋಮುವಾದಿ ಪತ್ರಕರ್ತ ಮಂಜುನಾಥ್ ನಾಯಕ್ ತಾಳಮಕ್ಕಿ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಿಪಟೂರಿನಲ್ಲೂ ಪತ್ರಕರ್ತ ಮಂಜುನಾಥ್ ತಾಳಮಕ್ಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ತಿಪಟೂರು ತಾಲ್ಲೂಕು ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಾತಿ ನಿಂದನೆ ಮಾಡಿರುವ ಆರೋಪಿ ಮಂಜುನಾಥ್ ತಾಳಮಕ್ಕಿ ವಿರುದ್ದ ಗೂಂಡಾ ಕಾಯ್ದೆ ಹಾಕಬೇಕು ಎಂದು ಘೋಷಣೆ ಕೂಗಿದರು.

 ಮಂಡ್ಯದಲ್ಲಿದ್ದ ವೇಳೆ ಮಂಜುನಾಥ್ ತಾಳಮಕ್ಕಿ ದಲಿತ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದ. ಹೀಗಾಗಿ ಅಲ್ಲಿಯೂ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಇದೇ ಚಾಳಿಯನ್ನು ತುಮಕೂರಿನಲ್ಲೂ ಮುಂದುವರೆಸಿದ್ದಾನೆ ಎಂದು ಕಿಡಿಕಾರಿದರು.

ತುಮಕೂರಿನಲ್ಲಿಯೂ ಹಲವು ಪತ್ರಕರ್ತರ ಮೇಲೆ ಜಗಳ-ವಾಗ್ಯುದ್ದ ಮಾಡಿರುವ ಮಂಜುನಾಥ್ ತಾಳಮಕ್ಕಿ ಪ್ರಕರಣದಲ್ಲಿ ಕೂಲಂಕಷವಾಗಿವಾಗಿ ತನಿಖೆ ನಡೆಸಿ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...