ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.
ಚಿಕ್ಕೋಡಿ ತಾಲೂಕಿನ ನಾಗರ ಮುನ್ನೊಳಿ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ನಾಗರಮುನ್ನೋಳಿಯ ವೈದ್ಯ ಡಾ.ಸಿದ್ರಾಮ್ ಚೌಗಲಾ ಎಂದು ಗುರುತಿಸಲಾಗಿದೆ.
ಅಪಘಾತದ ಸ್ಥಳಕ್ಕೆ ಹುಕ್ಕೇರಿ ಠಾಣೆಯ ಪೊಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
