ನನ್ನ ಸಹೋದರ ರಾಹುಲ್ ಜಾರಕಿಹೊಳಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಲಿದ್ದಾರೆ. ಆ ಮೂಲಕ ರಾಜ್ಯ ರಾಜಕಾರಣಕ್ಕೆ ಕಾಲಿಡಲಿದ್ದಾರೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಚುನಾವಣೆಯಲ್ಲಿ ಕೆಲಸ ಮಾಡಲಾಗುತ್ತಿದೆ. ಚುನಾವಣೆ ಪ್ರಕ್ರಿಯೆ ಆನ್‌ಲೈನ್ ಮೂಲಕ ನಡೆಯುತ್ತಿದ್ದು, ಈ ಕುರಿತು ಯುವಕರಿಗೆ ದೂರವಾಣಿ ಮೂಲಕ ಸಂಪರ್ಕಿಸಲಾಗಿದೆ ಎಂದರು.
ಚುನಾವಣೆಯಲ್ಲಿ ಸಹೋದರ ರಾಹುಲ್ ಜಾರಕಿಹೊಳಿ ಜಯಗಳಿಸಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣಕ್ಕೆ ಕಾಲಿಡಲಿದ್ದಾರೆ. ನನ್ನ ಸಹೋದರನಿಗೆ ರಾಜಕೀಯದಲ್ಲಿ ಏನಾದರೂ ಸಾಧಿಸಬೇಕು ಎಂಬ ಛಲವಿದೆ. ರಾಹುಲ್ ಜಾರಕಿಹೊಳಿ ರಾಜ್ಯ ರಾಜಕಾರಣಕ್ಕೆ ಬಂದರೆ ನಮ್ಮ ತಂದೆ ಸತೀಶ್ ಜಾರಕಿಹೊಳಿಯವರಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಗೋಕಾಕ್ | ಕೋ-ಆಪರೇಟಿವ್ ಬ್ಯಾಂಕ್‌ನಿಂದ ₹74 ಕೋಟಿ ವಂಚನೆ ಆರೋಪ: 14 ಜನರ ವಿರುದ್ಧ ದೂರು ದಾಖಲು
ನಾನು ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟಿದ್ದು ನಮ್ಮ ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.