ಚಿಕ್ಕೋಡಿ | ರಾಜ್ಯ ರಾಜಕಾರಣಕ್ಕೆ ನನ್ನ ಸಹೋದರ ರಾಹುಲ್ ಕಾಲಿಡಲಿದ್ದಾರೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Date:

ನನ್ನ ಸಹೋದರ ರಾಹುಲ್ ಜಾರಕಿಹೊಳಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಲಿದ್ದಾರೆ. ಆ ಮೂಲಕ ರಾಜ್ಯ ರಾಜಕಾರಣಕ್ಕೆ ಕಾಲಿಡಲಿದ್ದಾರೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

- Advertisement -

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಚುನಾವಣೆಯಲ್ಲಿ ಕೆಲಸ ಮಾಡಲಾಗುತ್ತಿದೆ. ಚುನಾವಣೆ ಪ್ರಕ್ರಿಯೆ ಆನ್‌ಲೈನ್ ಮೂಲಕ ನಡೆಯುತ್ತಿದ್ದು, ಈ ಕುರಿತು ಯುವಕರಿಗೆ ದೂರವಾಣಿ ಮೂಲಕ ಸಂಪರ್ಕಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚುನಾವಣೆಯಲ್ಲಿ ಸಹೋದರ ರಾಹುಲ್ ಜಾರಕಿಹೊಳಿ ಜಯಗಳಿಸಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣಕ್ಕೆ ಕಾಲಿಡಲಿದ್ದಾರೆ. ನನ್ನ ಸಹೋದರನಿಗೆ ರಾಜಕೀಯದಲ್ಲಿ ಏನಾದರೂ ಸಾಧಿಸಬೇಕು ಎಂಬ ಛಲವಿದೆ. ರಾಹುಲ್ ಜಾರಕಿಹೊಳಿ ರಾಜ್ಯ ರಾಜಕಾರಣಕ್ಕೆ ಬಂದರೆ ನಮ್ಮ ತಂದೆ ಸತೀಶ್ ಜಾರಕಿಹೊಳಿಯವರಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಗೋಕಾಕ್ | ಕೋ-ಆಪರೇಟಿವ್‌ ಬ್ಯಾಂಕ್‌ನಿಂದ ₹74 ಕೋಟಿ ವಂಚನೆ ಆರೋಪ: 14 ಜನರ ವಿರುದ್ಧ ದೂರು ದಾಖಲು

ನಾನು ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟಿದ್ದು ನಮ್ಮ ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...