ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15) ಹಾಗೂ ಸಮರ್ಥ ಚೌಗಲೆ (13) ಮೃತ ಬಾಲಕರು.
ಬಹಳ ಸಮಯದವರೆಗೆ ಬಾಲಕರು ಮನೆಗೆ ಬಾರದಿದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಇತ್ತ ಕೃಷಿ ಹೊಂಡದಲ್ಲಿ ಬಿದ್ದು ಬಾಲಕರು ಸಾವನ್ನಪ್ಪಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅನೇಕ ಕೃಷಿ ಹೊಂಡಗಳಲ್ಲಿ ಕೆಸರು ಕೂಡ ತೆಗೆಯಲಾಗುತ್ತಿಲ್ಲ ಇದರಿಂದ ಈಜಲು ಹೋದ ಎಷ್ಟೋ ಮಂದಿ ಮೇಲೆ ಬರಲು ಸಾಧ್ಯವಾಗದೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ | ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲ ಆರೋಪ; ಇಬ್ಬರು ಪೊಲೀಸರ ಅಮಾನತು