ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿಗೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ನಡಿದಿದೆ.
ಮೃತ ಯುವಕ ವಿಶ್ಲೇಶ್ (18), ಕೊಪ್ಪ ಪಟ್ಟಣದಲ್ಲಿರುವ ಐಟಿಐ ಸಂಸ್ಥೆಯಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ, 4 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಮಾನಸಿಕ ಹಾಗೂ ಶಾರೀರಿಕ ನೋವಿನಿಂದ ಬಳಲುತ್ತಿದ್ದ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಮುಸ್ಲಿಂ ಮುಖಂಡರ ಪ್ರತಿಭಟನೆ
ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಆಸ್ಪತ್ರೆಗೆ ತೋರಿಸುತ್ತಿದ್ದ, ಪ್ರತಿ ಸಲ ಚಿಕಿತ್ಸೆಗೆ ಹೋಗಬೇಕಾದ ಕಾರಣ ಹಾಗೂ ನೋವಿನಿಂದ ಮಾನಸಿಕ ಖಿನ್ನತೆಗೊಳಗಾಗಿ ಯುವಕ ಮನೆಯಲ್ಲಿಯೇ, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
