ಚಿಕ್ಕಮಗಳೂರು | ಅಂಬೇಡ್ಕರ್ ಜಯಂತಿ: ಕಾರು ಹರಿದು ಸ್ಥಳದಲ್ಲೇ ಬಾಲಕಿ ಸಾವು 

Date:

ಅಂಬೇಡ್ಕರ್ ಜಯಂತಿ ಆಚರಣೆಯ ಸಂಭ್ರಮದಲ್ಲಿ ಜನರ ಮೇಲೆ ಕಾರು ಹರಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ. 

- Advertisement -

ಬಿಳೇಕಲ್ಲು ಗ್ರಾಮದಲ್ಲಿ ಮೆರವಣಿಗೆಗೆ ಸಿದ್ಧತೆ ನಡೆಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ರಸ್ತೆಯ ಬದಿಯಲ್ಲಿ ನೆರೆದಿದ್ದ ಜನರ ಮೇಲೆ ಕುಡಿದ ಅಮಲಿನಲ್ಲಿ ವೇಗವಾಗಿ ಬಂದ ಕಾರು ಹರಿದಿದೆ. ಈ ಭೀಕರ ಅಪಘಾತದಲ್ಲಿ ಏಳು ವರ್ಷದ ಸಾನ್ವಿ ಎಂಬ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಿಶ್ಚಿತ್, ತೃಪ್ತಿ ಮತ್ತು ತಿಮ್ಮರಾಜು ಸೇರಿದಂತೆ ಒಂಬತ್ತು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಸುಧಾಕರ್ ಎಂಬಾತ ಮದ್ಯದ ಅಮಲಿನಲ್ಲಿ ಕಾರನ್ನು ಚಲಾಯಿಸುತ್ತಾ ಬಂದು ಹಂಪ್ ಬಳಿ ನಿಯಂತ್ರಣ ಕಳೆದುಕೊಂಡು ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಬೆನ್ನಲ್ಲೇ ಆಕ್ರೋಶಗೊಂಡ ಸ್ಥಳೀಯರು ಚಾಲಕ ಸುಧಾಕರ್‌ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದು, ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಮೆಡಿಕಲ್‌ ಕಾಲೇಜಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಅಪಘಾತವನ್ನು ಕಂಡ ಬಾಲಕಿಯ ಸಂಬಂಧಿ ಭಾಗ್ಯ ಘಟನೆಯನ್ನು ನೋವಿನಿಂದ ವಿವರಿಸಿದ್ದಾರೆ. ಹಬ್ಬದ ಪ್ರಯುಕ್ತ ನಡೆದ ಮೆರವಣಿಗೆಯನ್ನು ರಸ್ತೆ ಬದಿಯಲ್ಲಿ ನಿಂತು ವೀಕ್ಷಿಸುತ್ತಿದ್ದಾಗ ಅತಿ ವೇಗವಾಗಿ ಬಂದ ಕಾರು ಮೊದಲು ಮರಕ್ಕೆ ಡಿಕ್ಕಿ ಹೊಡೆದು ನಂತರ ಉಳಿದವರ ಮೇಲೆ ಹರಿದಿದೆ ಎಂದು ವಿವರಿಸಿದ್ದಾರೆ. ಈ ಘಟನೆಯಲ್ಲಿ ಸೃಷ್ಟಿ, ತೃಪ್ತಿ ಮತ್ತು ಸಾನ್ವಿ ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ಮಗುವಿನ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಮಗುವಿನ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ 

ಒಟ್ಟಾರೆ ಕುಡಿದ ಅಮಲಿನಲ್ಲಿ ಚಾಲಕ ಮಾಡಿದ ಆ ಒಂದು ಎಡವಟ್ಟು, ಏಳು ವರ್ಷದ ಪುಟ್ಟ ಮಗುವಿನ ಬದುಕನ್ನೇ ಕಿತ್ತುಕೊಂಡಿದೆ.ಈ ಘಟನೆ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ...

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...