ಚಿಕ್ಕಮಗಳೂರು | ಒಪ್ಪತ್ತಿನ ಗಂಜಿಗೂ ಪರದಾಡುತ್ತಿದೆ ಆಸೀನಾ ಕುಟುಂಬ

Date:

ಸುಮಾರು 25 ವರ್ಷಗಳಿಂದ ಅಕ್ಕಿಪಿಕ್ಕಿ ಸುಮುದಾಯದ 45 ಕುಟುಂಬಗಳ ಜನರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲ್ಲೇನಹಳ್ಳಿ ಬಳಿಯ ಅಕ್ಕಿಪಿಕ್ಕಿ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ. ಆದರೆ, ಈ ವರೆಗೆ ಆ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿಲ್ಲ. ದೂರದ ಊರುಗಳಿಗೆ ಹೋಗಿ, ಕೂಲಿ ಮಾಡಿ, ಈ ಕುಟುಂಬಗಳು ಜೀವನ ನಡೆಸುತ್ತಿವೆ.

- Advertisement -

45 ಅಕ್ಕಿಪಿಕ್ಕಿ ಕುಟುಂಬಗಳಲ್ಲಿ ಆಸೀನಾ ಅವರ ಕುಟುಂಬವೂ ಒಂದು. ಆಕೆ ಗಂಡ ಅನಾರೋಗ್ಯಕ್ಕೆ ತುತ್ತಾಗಿ, ಮೂಲೆ ಸೇರಿದ್ದಾರೆ. ಅವರು ನಾಲ್ಕು ಮಕ್ಕಳು ಅಪ್ರಾಪ್ತರು. ಆರು ಮಂದಿಯ ಕುಟುಂಬವನ್ನು ಆಸೀನಾ ಅವರೇ ಸಲಹುತ್ತಿದ್ದಾರೆ. ಕಾಡು-ಮೇಡು ಅಲೆದು, ಕೂಲಿ ಮಾಡಿ, ಕುಟುಂಬವನ್ನು ದೂಡುತ್ತಿದ್ದಾರೆ. ಒಂದು ದಿನ ಕೂಲಿ ಸಿಗದಿದ್ದರೂ, ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ಆ ಕುಟುಂಬಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ತಮ್ಮ ಸಂಕಷ್ಟಗಳ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಆಸೀನಾ, “ಅಕ್ಕಿಪಿಕ್ಕಿ ಕಾಲೋನಿಯಲ್ಲಿ ಗುಡಿಸಿಲು ಕಟ್ಟಿಕೊಂಡು ಬದುಕುತ್ತಿದ್ದೆವು. ಎರಡ್ಮೂರು ವರ್ಷಗಳ ಹಿಂದೆ ಬೆಂಕಿ ತಗುಲಿ, ಗುಡಿಸಲು ಸುಟ್ಟು ಕರಕಲಾಯಿತು. ಆ ಸಮಯದಲ್ಲಿ ನಮ್ಮ ಕ್ಷೇತ್ರದಲ್ಲಿ ಸಿ.ಟಿ ರವಿ ಶಾಸಕರಾಗಿದ್ದರು. ಪರಿಹಾರಕ್ಕೆಂದು ಅವರ ಕಚೇರಿಗೆ ಹೋದರೆ, 2,000 ರೂ. ಕೊಟ್ಟು ಹೊರಗೆ ಕಳಿಸು ಅಂದಿದ್ರು. ನಮ್ಮ ಕಷ್ಟಕ್ಕೆ ಕಿಂಚಿತ್ತು ಕರುಣೆ ತೋರಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮನೆ1

“ಕುಟುಂಬ ನಿರ್ವಹಣೆಗೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲೂ ನಮಗೆ ಆಗುತ್ತಿಲ್ಲ. ಪ್ರತಿ ತಿಂಗಳಿಗೆ 3 ಕೆಜಿ ಆಕ್ಕಿ ಕೊಡುತ್ತಾರೆ. ಅದು ಸಾಕಾಗುವುದಿಲ್ಲ. ಸರ್ಕಾರದಿಂದ ರಾಜೀವ್ ಗಾಂಧಿ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಡೋದಾಗಿ ಗ್ರಾಮ ಪಂಚಾಯತಿಯವರು ಹೇಳಿದ್ರು, ಅರ್ಧ ಕಾಮಗಾರಿ ಮಾಡಿದ್ದಾರೆ” ಎಂದರು.

“ಮಳೆ ಬಂದರೆ ಮನಿಯೊಳಗೆ ನೀರು ನುಗ್ಗುತ್ತದೆ. ಛಾವಣಿಯೂ ಸೋರುತ್ತದೆ. ನನಗೂ ನನ್ನ ಗಂಡನಿಗೆ ಆರೋಗ್ಯ ಸರಿ ಇಲ್ಲ. ಒಂದಿನ ಕೆಲಸಕ್ಕೆ ಹೋದ್ರೆ ಇನ್ನೊಂದು ದಿನ ಹೋಗಲು ಆಗುವುದಿಲ್ಲ. ಮಕ್ಕಳಿಗೆ ಒಂದೊಪ್ಪತ್ತಿನ ಗಂಜಿಗೂ ನರಕಯಾತನೆ ಆಗುತ್ತಿದೆ” ಎಂದು ಹೇಳಿದರು.

ಸಂಬಂಧಪಟ್ಟ ಅಧಿಕಾರಿಗಳು ಮನೆ ಕಾಮಗಾರಿಯನ್ನ ಪೂರ್ಣಗೊಳಿಸಿಕೊಡಬೇಕು. ತಮ್ಮ ಕುಟುಂಬಕ್ಕೆ ನೆರವು ನೀಡಬೇಕೆಂದು ಆಸೀನಾ ಕುಟುಂಬ ಎದುರು ನೋಡುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...