ಚಿಕ್ಕಮಗಳೂರಿನಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು, ಅಪಘಾತವಾಗಿರುವ ಘಟನೆ ನಡೆದಿದೆ. ಆ ಕಾರು ಕನ್ನಡ ಕಿರುತೆರೆಯ ಕಾಮೆಡಿ ನಟ ಚಂದ್ರಪ್ರಭ ಅವರಿಗೆ ಸೇರಿದ್ದು ಎಂದು ಆರೋಪಿಸಲಾಗಿದೆ. ದ್ವಿಚಕ್ರ ವಾಹನ ಸವಾರನ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು, ಬೈಕ್ ಸವಾರನಿಗೆ ಗಾಯವಾದರೂ, ಕಾರು ಚಾಲಕ ಕಾರು ನಿಲ್ಲಿಸದೆಯೇ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿಡಿಯೋವನ್ನು ಪೊಲೀಸರು ಪಡೆದುಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತನಕ್ಕೀಡಾದವರು ಜಿಲ್ಲೆಯ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂದು ತಿಳಿದುಬಂದಿದೆ. ಅವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಬೈಕ್ನಲ್ಲಿ ಮನೆಗೆ ತೆರಳುವಾಗ ಅವರ ಬೈಕ್ಗೆ ಕಾರು ಗುದ್ದಿದೆ.
ಮಾಲ್ತೇಶ್ ಅವರನ್ನು ಹಾಸನದ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿದೆ. ಅವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದುಬಂದಿದೆ.