ಚಿಕ್ಕಮಗಳೂರು | ಐದು ವರ್ಷದ ಹಿಂದಿನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Date:

ಐದು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ 22.11.2020 ರಂದು ಸಖರಾಯಪಟ್ಟಣದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಡಿಹಟ್ಟಿ ಗ್ರಾಮದಲ್ಲಿ ಪ್ರದೀಪ ಎಂಬುವವನನ್ನು ಆತನ ಹೆಂಡತಿ ರಾಗಿಣಿ (33) ಮತ್ತು ಪ್ರದೀಪನೊಂದಿಗೆ ಗಾರೆ ಕೆಲಸ ಮಾಡಿಕೊಂಡಿದ್ದ ಶ್ರೀನಿವಾಸ (33) ಸೇರಿಕೊಂಡು ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ ಹಿನ್ನಲೆಯಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ ತನಿಖೆಯನ್ನು ಪೂರ್ಣಗೊಳಿಸಿದ ಕಡೂರು ವೃತ್ತದ ಅಂದಿನ ಸಿ.ಪಿ.ಐ.ಬಿ. ಎಸ್. ಮಂಜುನಾಥ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಘನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಮಗಳೂರು ನಿನ್ನೆ ಇಬ್ಬರೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60,000 ದಂಡವನ್ನು ವಿಧಿಸಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಶುದ್ಧ ರಕ್ತದವರು ನಮ್ಮ ಜೊತೆ ಇದ್ದಾರೆ, ಬೆರಕೆಯವರು ಈ ರೀತಿ ಮಾತನಾಡುತ್ತಾರೆ: ಸಿ. ಟಿ. ರವಿ ತಿರುಗೇಟು

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹೆಚ್ ಎಸ್‌ ಲೋಹಿತಾಶ್ವಚಾರ್ ರವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಎ.ಎಸ್.ಐ. ದೇವೇಂದ್ರ ಕುಮಾರ್ ಎಸ್ ಓ ರವರು ನ್ಯಾಯಾಲಯದ ಕರ್ತವ್ಯ, ಪೊಲೀಸ್ ಸಿಬ್ಬಂದಿಗಳಾದ ವಸಂತ್ ಕುಮಾರ್ ಮತ್ತು ನಜೀರ್ ಬಿ ಎ ರವರು ತನಿಖಾ ಸಹಾಯಕರಾಗಿ ಹಾಗೂ ರೇಣುಕರಾಜ್ ರವರು ಪ್ರೋಸೆಸ್ ಕರ್ತವ್ಯ ನಿರ್ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...