ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ಶುಕ್ರವಾರ ಸಂಜೆ ನಡೆಸಿದೆ.
ಚಿಕ್ಕಮಗಳೂರಿನ ಉಜ್ಜೈನಿಯಲ್ಲಿ ಲೋಕಸಭಾ ಚುನಾವಣೆಯ ಮತದಾನದ ವೇಳೆ, ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದುತ್ವವಾದಿ ಕಾರ್ಯಕರ್ತ ಪ್ರವೀಣ್ ಖಾಂಡ್ಯ ನಡುವೆ ಜಗಳವಾಗಿದೆ. ಈ ವೇಳೆ, ಪ್ರವೀಣ್ ಖಾಂಡ್ಯ ಮೇಲೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ.
ಸಂಘಪರಿವಾರದಲ್ಲಿ ಗುರತಿಸಿಕೊಂಡಿದ್ದ ಪ್ರವೀಣ್ ಖಾಂಡ್ಯ ಮೇಲೆ ಬಿಜೆಪಿಗರಿಗೆ ಹಳೆಯ ದ್ವೇಷವಿತ್ತು. ಅದೇ ಕಾರಣಕ್ಕಾಗಿ, ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರವೀಣ್ ತಲೆ ಮತ್ತು ಕೈಗೆ ಗಂಭೀರ ಗಾಯಗಳಾಗಿವೆ. ಆತನನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.