ಚಿಕ್ಕಮಗಳೂರು | ಒತ್ತುವರಿ ತೆರವು ಖಂಡಿಸಿ ಕಳಸ ಬಂದ್ ಯಶಸ್ವಿ

Date:

ರಾಜ್ಯ ಸರ್ಕಾರದ ಅಕ್ರಮ ಒತ್ತುವರಿ ತೆರವು ಖಂಡಿಸಿ ರೈತ ಸಂಘಟನೆಗಳು ಬುಧವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಂದ್​ಗೆ ಕರೆ ನೀಡಿತ್ತು. ಈ ಬಂದ್‌ಗೆ ಕಳಸ ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

- Advertisement -

ಅಂಗಡಿ – ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಬಂದ್​ಗೆ ಬೆಂಬಲ ಸೂಚಿಸಿದ್ದು, ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದವು. ಕನ್ನಡ, ದಲಿತ ಸಂಘಟನೆ ಸೇರಿ ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಕಾಫಿ ಬೆಳಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

“ಬದುಕಿಗಾಗಿ ಮಾಡಿರುವ 2-3 ಎಕರೆ ಒತ್ತುವರಿಯೇ ಹೆಚ್ಚಾಗಿದೆ. ಒತ್ತುವರಿ ತೆರವು ಮಾಡಿದರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ. ಕೂಡಲೇ ಅಕ್ರಮ ಒತ್ತುವರಿ ತೆರವು ಕೈಬಿಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೆಳಗ್ಗೆ ಅಂಗಡಿಗಳು, ಶಾಲಾ-ಕಾಲೇಜುಗಳು ಮುಚ್ಚಿದ್ದವು. ಸಂಜೆ 4ರ ನಂತರ ಅಂಗಡಿಗಳು ತೆರೆದವು. ಕಳಸೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಭಾಗವಹಿಸಿದ್ದರು. ಕಳಸ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡಲಾಯಿತು. ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಹೈಕೋರ್ಟ್ ಚೀಫ್ ಜಸ್ಟೀಸ್ ಭೇಟಿ ನೀಡಿದ್ದು, ಪ್ರತಿಭಟನಾ ಮಾರ್ಗದಲ್ಲಿ ನ್ಯಾಯಮೂರ್ತಿಗಳು ಸಾಗುವ ವೇಳೆ, “ನಮ್ಮ ನೋವು ನ್ಯಾಯಮೂರ್ತಿಗಳಿಗೂ ಗೊತ್ತಾಗಲಿ” ಎಂದು ಹೋರಾಟಗಾರರು ಘೋಷಣೆ ಕೂಗಿದರು.

‘ಮಲೆನಾಡಿನ ಕಾಫಿ ತೋಟಗಳು ಅರಣ್ಯದ ಸ್ವರೂಪದಲ್ಲೇ ಇವೆ ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ. ಸದ್ಯಕ್ಕೆ ಯಾವುದೇ ಭೂಮಿ ತೆರವು ಮಾಡದಂತೆ ಅರಣ್ಯ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ರಾಜಕೀಯ ಪ್ರೇರಿತ ವದಂತಿ ನಂಬಬಾರದು’ ಎಂದು ಶಾಸಕ ಟಿ.ಡಿ.ರಾಜೇಗೌಡ ಮನವಿ ಮಾಡಿದರು.

photo 6271620359719600987 y

‘ಅರಣ್ಯ ಅಧಿಕಾರಿಗಳು ರೈತರ ಭೂಮಿ ತೆರವು ಮಾಡುವ ಯತ್ನ ಮಾಡಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುತ್ತೇನೆ’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಳಸ ತಹಶೀಲ್ದಾರ್ ಕೆ ಎಸ್‌ ದಯಾನಂದ್‌ ಹೋರಾಟ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ಹಕ್ಕೊತ್ತಾಯ ಪತ್ರವನ್ನು ಸ್ವೀಕರಿಸಿ, ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...