ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

Date:

Advertisements

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ ರಕ್ಷಣೆ ಮಾಡಲು ಹೋದಾಗ ಮತ್ತೊರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಖರಾಯಪಟ್ಟಣ ಹೋಬಳಿಯ ಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಯುವಕ ಸಾದರಹಳ್ಳಿ ಗ್ರಾಮದ ಯತೀಶ್ (25),ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಮುಂದುವರಿಸಿದ್ದಾರೆ. ಸಖರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿರುವ ಸ್ಮಶಾನದ ಹಳ್ಳ ತುಂಬಿ ರಸ್ತೆ ಮೇಲೆ ಹರಿಯುತ್ತಿದೆ. ಪೊಲೀಸರು ಬ್ಯಾರಿಕೇಡ್ ಇಟ್ಟು ಸಾರ್ವಜನಿಕರು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿದ್ದೀರಾ?ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

Advertisements

ಗುರುವಾರ ಬೆಳಗ್ಗೆ ಯತೀಶ್ ಹಾಗೂ ಆತನ ಸ್ನೇಹಿತ ಬೈಕ್‌ನಲ್ಲಿ ಈ ರಸ್ತೆಯ ಮೇಲೆ ಹೋಗಿದ್ದು, ರಸ್ತೆಯ ಮೇಲೆ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ -ಬೈಕ್ ದಾಟಿಸಲು ಹೋದ ವೇಳೆ ಸವಾರ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದಾನೆ, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ, ಸ್ನೇಹಿತನ ರಕ್ಷಣೆ ಮಾಡಲು ಯತೀಶ್ ಮುಂದಾದ ವೇಳೆ ನಿಯಂತ್ರಣ ತಪ್ಪಿಹಳ್ಳಕ್ಕೆ ಬಿದ್ದಿದ್ದು, ಆತ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಸ್ನೇಹಿತ ಬಚಾವಾಗಿದ್ದಾನೆ ಎಂದು -ತಿಳಿದು ಬಂದಿದೆ. ಯತೀಶ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Wonderful beat I wish to apprentice while you amend your web site how could i subscribe for a blog web site The account aided me a acceptable deal I had been a little bit acquainted of this your broadcast provided bright clear idea

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X