ಚಿಕ್ಕಮಗಳೂರು l ದನ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ 

Date:

ದನ ಕಳ್ಳತನ ಮಾಡಿ ಸಾಗಿಸುತ್ತಿದ್ದಾಗ ಆರೋಪಿಗಳನ್ನ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.

- Advertisement -

ಆರೋಪಿಗಳಾದ ಸಲ್ಮಾನ್ ಖಾನ್@ಸಂಪತ್ ಬಿನ್ ಅಶ್ವಕ ಖಾನ್ (21 ), ಸಾಹಿಲ್ ಬಿನ್ ಲೇಟ್ ಜಮಿಲ್ ಅಹಮ್ಮದ್ (21), ಸಯ್ಯದ ತೌಫಿಕ್ ಬಿನ್ ಸೈಯದ್ ಐಜಾಜ್ (32 ), ಅಬ್ದುಲ್ ಅಜೀಜ್ ಬಿನ್ ಅಬ್ದುಲ್ ನಜೀರ್ (34), ಅಬ್ದುಲ್ ಜಾವಾದ್ ಬಿನ್ ಅಬ್ದುಲ್ ಹಾಕ್ (22), ಪೊಲೀಸರು ಜಾನುವಾರುಗಳನ್ನು ರಕ್ಷಿಸಿದ್ದು, ಹಾಗೂ ಕೃತ್ಯಕ್ಕೆ ಬಳಸಿದ ವಾಹನ & ಮೊಬೈಲ್ ಗಳನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜುಲೈ 10ರಂದು ಕಳಸ ಪೊಲೀಸ್ ಠಾಣಾ ವ್ಯಾಪ್ತಿಯ ಬಲಿಗೆ ಚೆಕ್ ಪೋಸ್ಟ್ ಹತ್ತಿರ xylo ವಾಹನದಲ್ಲಿ ಐದು ಜನ ಆರೋಪಿತರು ನಾಲ್ಕು ದನಗಳನ್ನು ಸಾಗಿಸಿಕೊಂಡು ಹೋಗುತ್ತಿರುವಾಗ ಸ್ಥಳೀಯರ ಮಾಹಿತಿಯನ್ನು ಖಚಿತ ಪಡಿಸಿಕೊಂಡು ಶೋಧ ಕಾರ್ಯ ನಡೆಸಲಾಗಿದೆ. ಕಳಸ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿತರು ಕದ್ದು ಪರಾರಿಯಾಗಿದ್ದರಿಂದ ವಾಹನದಲ್ಲಿದ್ದ ನಾಲ್ಕು ದನಗಳನ್ನು ರಕ್ಷಿಸಿ ಮತ್ತು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಎಲ್ಲಾ ಆರೋಪಿಗಳು ಚಿಕ್ಕಮಗಳೂರು ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆ, ಹಾವೇರಿ ಜಿಲ್ಲೆ, ಚಿತ್ರದುರ್ಗ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದನಕಳ್ಳತನ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿದ್ದು, ಆರೋಪಿಗಳು ಪದೇ ಪದೇ ದನಕಳ್ಳತನ ಮಾಡುವ ಪ್ರವೃತ್ತಿಯುಳ್ಳವರೆನ್ನಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮೂವರು ಅಂತಾರಾಷ್ಟ್ರೀಯ ಮನೆಗಳ್ಳರ ಬಂಧನ

ಠಾಣಾ ಮೊ.ನಂ: 40/2025 ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ. ಈ ಕುರಿತು ಡಾ.ವಿಕ್ರಂ ಅಮಟೆ ಐಪಿಎಸ್ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಬಾಲಾಜಿ ಸಿಂಗ್ ಪೊಲೀಸ್ ಉಪಾಧೀಕ್ಷಕರು ಕೊಪ್ಪ ಉಪವಿಭಾಗರವರ ನೇತೃತ್ವದಲ್ಲಿ ಕಳಸ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿಗಳಾದ  ಗಿರೀಶ, ಶಿವಕುಮಾರ, ನಿಖಿಲ್, ಸಿದ್ದಪ್ಪ ಕರಂಡಿ, ಪ್ರಮೋದ್ ಎಲ್, ಹೆಚ್ ವಿನಯ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...