ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ.
ಮೃತ ಯುವಕ ನಾಗೇಶ್ ಸಾವಿಗೆ ಕಾರಣರಾದ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ಮತ್ತು ಸಹಾಯ ಮಾಡಿದ ಸ್ನೇಹಿತನಾದ ರಂಜಿತ್ ಎಂಬುವವರನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ ಎಂದು ಕೊಪ್ಪ ತಾಲೂಕಿನ ಡಿವೈಎಸ್ಪಿ ಈದಿನ.ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ
ಈ ಘಟನೆ ಕುರಿತು ಚಿಕ್ಕಮಗಳೂರು ಎಸ್ ಪಿ ಅವರು ನೇಮಿಸಿದ್ದ ವಿಶೇಷ ತಂಡ ತನಿಖೆ ಆರಂಭಿಸಿ, ಆರೋಪಿಗಳನ್ನ ಬಂಧಿಸಲಾಗಿದೆ. ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.