ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭೈರದೇವರು ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ರತ್ನಾಕರ (38), ಕಳೆದ ಎರಡು ದಿನದಿಂದ ಜಯಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ; ಸಂಪುಟ ಸಭೆಗೆ ಕಡತ ಮಂಡಿಸಲು ಸೂಚನೆ
ಮರ ಬಿದ್ದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮಳೆಗಾಲದಲ್ಲಿ ಬೀಳುವಂತಹ ಮರಗಳನ್ನು ಅರಣ್ಯ ಇಲಾಖೆಯವರು ಕತ್ತರಿಸದೆ ಇರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹಾಕಿದ್ದಾರೆ. ಈ ಘಟನೆಯಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.