ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಹಲವೆಡೆ ಗುಡ್ಡ ಕುಸಿಯುತ್ತಿದೆ. ಹಾಗೆಯೇ, ಬಾಬ ಬುಡನ್ ಗಿರಿಗೆ ಹೋಗುವ ರಸ್ತೆಯಲ್ಲಿ ಗುಡ್ಡ ಕುಸಿದಿರುವ ಘಟನೆ ಶನಿವಾರ ನಡೆದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಂಬೇಡ್ಕರ್ ಪ್ರತಿಮೆಗೆ ಸ್ಥಳ ಗುರುತಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಕೆ ಎಲ್ ಅಶೋಕ್
ಬಾಬ ಬುಡನ್ ಗಿರಿ ವ್ಯಾಪ್ತಿಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ದಿನ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ವಾಹನಗಳು ಸಂಚಾರ ಮಾಡುತ್ತಿದ್ದು, ಜನರಲ್ಲಿ ಗುಡ್ಡ ಕುಸಿಯುವ ಆತಂಕ ಹೆಚ್ಚಾಗಿದೆ.