ಸುಮಾರು ದಿನಗಳಿಂದ ಜನರಿಗೆ ಭಯದ ವಾತಾವರಣ ಸೃಷ್ಟಿಸಿದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಮುಜೇಖಾನ್ ಗ್ರಾಮದಲ್ಲಿ ಬುಧವಾರ ನಡೆದಿದೆ
ಹಳುವಳ್ಳಿ ಸಮೀಪದ ಮುಜೇಖಾನ್ ಗ್ರಾಮದ ಸುತ್ತಮುತ್ತಲಿನಲ್ಲಿ ಕಳೆದ ಮೂರು ತಿಂಗಳಿಂದ ಹಗಲು- ರಾತ್ರಿ ಜಾನುವಾರುಗಳು ಸೇರಿದಂತೆ ಶ್ವಾನಗಳ ಮೇಲೆ ಚಿರತೆ ನಿರಂತರವಾಗಿ ದಾಳಿ ಮಾಡುತ್ತಿತ್ತು, ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಒತ್ತಾಯಿಸಿದ್ದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ
ಗ್ರಾಮಸ್ಥರ ಮೇರೆಗೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಈ ಘಟನೆಯಿಂದ ಜನರು ಮನೆಯಿಂದ ಹೊರ ಬರಲು ಭಯಪಡುತ್ತಿದ್ದರು. ಚಿರತೆ ಸೆರೆ ಸಿಕ್ಕಿರುವುದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಸಿಬ್ಬಂದಿಗಳು ತಕ್ಷಣ ಚಿರತೆಯನ್ನು ಮತ್ತೊಂದು ಕಡೆಗೆ ಸ್ಥಳಾಂತರ ಮಾಡಲಾಗಿದೆ.