ಅಹಮದಾಬಾದ್ ನಿಂದ ಕೇರಳದತ್ತ ಸಾಗುತ್ತಿದ್ದ ಲಾರಿ ಪಲ್ಟಿಯಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಬಳಿ ನಡೆದಿದೆ.
ಅಪಘಾತದಿಂದ ಲಾರಿಯಲ್ಲಿದ್ದ, ಮೂವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವೇಗವಾಗಿ ಇಳಿಜಾರಿನಲ್ಲಿ ಬರುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿ: ರೈತ ಗಂಭೀರ ಗಾಯ
ಈ ವೇಳೆ ಸ್ಥಳೀಯರು ಹಾಗೂ ಪ್ರಯಾಣಿಕರು ಸೇರಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.