ಹಸುವಿನ ಖದೀಮರು ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಹಸುವಿನ ಮಾಲೀಕ ಶೇಖರಪ್ಪ ಎಂಬುವರು, ಹಸುವನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ತಂತಿ ಬೇಲಿಯನ್ನು ತುಂಡು ಮಾಡಿ ಹಸುವನ್ನು ಖದೀಯಲು ಪ್ರಯತ್ನಿಸಿ ವಿಫಲವಾದಾಗ ಆ ಕೋಪದಿಂದ ಹಸುವಿನ ಕೆಚ್ಚಲು ಕಟ್ಟರಿಸಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವದಿಂದ ಹಸು ನರಳಿ ಸಾವನ್ನಪ್ಪಿದೆ ಎಂದು ತಿಳಿಸಿದರು.
ಇದೇ ರೀತಿಯಲ್ಲಿ ಕಳೆದ ಜನವರಿ ತಿಂಗಳಲ್ಲಿ ಬೆಂಗಳೂರು ಭಾಗದ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಇದೀಗ ಚಿಕ್ಕಮಗಳೂರಿನಲ್ಲಿ ಇಂತಹದ್ದೇ ಘಟನೆ ನಡೆದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೂತುಗೋಡು ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಈ ಕುರಿತು ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ತಿಳಿಸಿದರು.