ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ವ್ಯಾಪ್ತಿಯ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಗೂಡ್ಸ್ ಆಟೋ ಚಾಲಕ ಅಬ್ದುಲ್ ರೆಹಮಾನ್ (62) ಬಣಕಲ್ ನಿವಾಸಿ, ಸ್ಥಳೀಯರು ಗಮನಿಸಿ ಗಾಯಗೊಂಡ ವ್ಯಕ್ತಿಯನ್ನು ಮೂಡಿಗೆರೆ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕುಡ್ಲ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಧರ್ಮಸ್ಥಳ ಪ್ರಕರಣ: ಬುರುಡೆ ಗ್ಯಾಂಗ್ ಮುಖವಾಡ ಹೊರಬರಲಿದೆ; ಸಿ.ಟಿ ರವಿ
ಈ ಘಟನೆ ಕುರಿತು ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.