ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ವೊಂದು 20 ಅಡಿ ಆಳದ ಹಳ್ಳಕ್ಕೆ ಬಿದ್ದ ಪರಿಣಾಮ ಅದರಲ್ಲಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದ ತೀರ್ಥಕೆರೆ ಗ್ರಾಮದ ಬಳಿ ನಡೆದಿದೆ.
ತೀರ್ಥಕೆರೆ ಸಮೀಪದ ಎಸ್ಟೇಟ್ ಒಂದರಲ್ಲಿ ಕೆಲಸಕ್ಕಾಗಿ ವಲಸೆ ಬಂದಿದ್ದ ಸುಮಾರು 40 ಜನ ಅಸ್ಸಾಂ ಮೂಲದ ಕಾರ್ಮಿಕರು ಹಾಗೂ ಕೆಲ ಸ್ಥಳೀಯರು ಟ್ರ್ಯಾಕ್ಟರ್‌ನಲ್ಲಿ ದಿನಸಿ ಖರೀದಿಗಾಗಿ ಜಯಪುರಕ್ಕೆ ಬಂದಿದ್ದರು ಎನ್ನಲಾಗಿದೆ. ಜಯಪುರ ಪಟ್ಟಣದಿಂದ ವಾಪಸ್ ತೆರಳುವಾಗ ತೀರ್ಥಕೆರೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದಿದೆ. ಗಾಯಾಳುಗಳಿಗೆ ಜಯಪುರ, ಕೊಪ್ಪ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಾಬಾ ಬುಡನ್ ಗಿರಿಗೆ ಕಾಫಿ ಬೆಳೆ ಹೇಗೆ ಬಂತು?
