ಜಕಣಕ್ಕಿ- ಕಾರಕಿ ಅರಣ್ಯ ಪ್ರದೇಶದ ಶೆಡ್ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿಯ ಮಾಗುಂಡಿ ಸಮೀಪ ನಡೆದಿದೆ.
ಮೃತ ವ್ಯಕ್ತಿ ಹಾವೇರಿ ಮೂಲದವರು ಎಂದು ತಿಳಿದು ಬಂದಿದೆ. ವ್ಯಕ್ತಿಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹಾಗಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ತಿಂಗಳೇ ಕಳೆದಿರುವ ಸಾಧ್ಯತೆ ಇರಬಹುದು ಎನ್ನಲಾಗಿದೆ. ಫಾರೆಸ್ಟ್ ಟೆಂಟ್ ಕೂಡ ಕೆಲವು ತಿಂಗಳಿಂದ ಬಳಕೆಯಲ್ಲಿ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೌಟುಂಬಿಕ ಕಲಹ ಮೂವರ ಹತ್ಯೆ; ಬಳಿಕ ಆರೋಪಿ ಆತ್ಮಹತ್ಯೆ
ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.