ರೈತರೊಬ್ಬರಿಗೆ ಕಾಡಾನೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕಾಡಾನೆ ದಾಳಿಯಿಂದ ಗಂಭೀರಗೊಂಡ ವ್ಯಕ್ತಿ ಫಿಲಿಪ್ (65), ರಾತ್ರಿ ವೇಳೆ ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಬಂದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿಗೊಳಗಾದ ವ್ಯಕ್ತಿಗೆ ಕಾಲು, ಎದೆ ಹಾಗೂ ಕೈಭಾಗಕ್ಕೆ ಗಂಭೀರ ಗಾಯವಾಗಿದ್ದು, ಸುತ್ತಮುತ್ತಲಿನ ಸ್ಥಳೀಯರು ಸಹಾಯದಿಂದ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭಾಗದ ಕಾಫಿ ತೋಟಗಳಲ್ಲಿ ಈಗಾಗಲೇ ಸುಮಾರು 35 ಕಾಡಾನೆಗಳು ಬೀಡುಬಿಟ್ಟಿದ್ದು, ನಿರಂತರವಾಗಿ ವಸತಿ ಪ್ರದೇಶಗಳಲ್ಲಿ ಸಂಚರಿಸುತ್ತಿರುವುದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ 5ನೇ ತಾರೀಕಿನೊಳಗೆ ಪಡಿತರ ಹಂಚಿಕೆಯಾಗಬೇಕು; ಕರಾಸಪವಿಸ ಆಗ್ರಹ
ಈ ಕುರಿತು ಘಟನೆ ನಡೆದ ಸ್ಥಳಕ್ಕೆ ಮಧ್ಯರಾತ್ರಿ ವೇಳೆ ಮೂಡಿಗೆರೆ ಅರಣ್ಯ ವಲಯ ರೇಂಜರ್ ಕಾವ್ಯ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯವರಿಂದ ಪರಿಶೀಲಿಸಿದ್ದಾರೆ. ಕಾಡಾನೆ ಹಾವಳಿಯಿಂದ ಹೆಚ್ಚಾಗಿದ್ದು, ಕಾಡಾನೆಗಳ ನಿಯಂತ್ರಣ ಹಾಗೂ ಸ್ಥಳಾಂತರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.