ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತ ಮಹಿಳೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ಅನಿತಾ (25), ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್ ಮನೆಯಲ್ಲಿ ಅನಿತಾ ವಾಸ ಮಾಡುತ್ತಿದ್ದರು. ಕಳೆದ ರಾತ್ರಿ 9 ಗಂಟೆಗೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಾದಕ ದ್ರವ್ಯ ಸೇವನೆ, ಅಕ್ರಮ ಕಳ್ಳಸಾಗಣೆ ವಿರೋಧಿಸಿ ಜಾಗೃತಿ ಕಾರ್ಯಕ್ರಮ
ಈ ಕುರಿತು ಗಂಭೀರವಾಗಿ ಗಾಯಗೊಂಡಿದ್ದ, ಮಹಿಳೆಯನ್ನು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಮಹಿಳೆ ಮೃತ ಪಟ್ಟಿದ್ದಾರೆ. ಕಳೆದ 10 ತಿಂಗಳಲ್ಲಿ ಇದು 4ನೇ ಬಲಿಯಾಗಿದೆ. ಈ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ, ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.