ಚಿಕ್ಕಮಗಳೂರು l ರೈತರ ಬೆಳೆಯನ್ನು ನಾಶ ಮಾಡಿದ ಕಾಡಾನೆ

Date:

ಮಲೆನಾಡಿನ ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದಿರುವಂತಹ ಬೆಳೆಗಳನ್ನು ಕಾಡಾನೆ ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ತೋಟದ ಮಾಲೀಕರಾದ ಕರಗಣೆ ಗ್ರಾಮದ ನವೀನ್ ಹಾಗೂ ಶಂಕ್ರೆಗೌಡ ಎಂಬುವರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆಗಳು ಅಡಕೆ, ಕಾಫಿಗಿಡಗಳನ್ನು ಸಂಪೂರ್ಣ ನಾಶ ಮಾಡಿವೆ. ಅಡಕೆ ಮರಗಳನ್ನು ಬುಡ ಸಮೇತ ಉರುಳಿಸಿ ಸಿಗಿದು ಹಾಕಿವೆ. ಫಸಲಿಗೆ ಬಂದ ಮರಗಳನ್ನು ಈ ರೀತಿ ಮುರಿದು ಹಾಕಿರುವುದರಿಂದ ಬೆಳೆಗಾರಿಗೆ ದಿಕ್ಕೇ ತೋಚದಂತಾಗಿದ್ದು, ಅರಣ್ಯ ಇಲಾಖೆಯೂ ಆನೆಗಳನ್ನು ಓಡಿಸದೆ ಕೈ ಕಟ್ಟಿ ಕುಳಿತಿದೆ ಎಂದು ರೈತರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಾವಿರಾರು ಪೋಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಗೊಳಿಸಬೇಕು; ರೈತ ಸಂಘ ಆಗ್ರಹ

ಈ ಕುರಿತು ಸರ್ಕಾರ ಬೆಳೆ ಹಾನಿಗೆ ನೀಡುವ ಪರಿಹಾರ ಕೇವಲ ಆನೆ ಹೊಟ್ಟೆಯನ್ನು ತುಂಬಿಸಲು ಕೂಡ ಆಗುವುದಿಲ್ಲ, ಎಂದು ಟೀಕಿಸುವ ಮೂಲಕ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ. ಆನೆಗಳನ್ನು ತಕ್ಷಣ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ರೈತರು ಹಾಗೂ ಸ್ಥಳೀಯರು  ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...