ಚಿಕ್ಕಮಗಳೂರು | ಮರ್ಕಲ್ ಗ್ರಾಮ ಪಂ. ಪಿಡಿಒ ಅಮಾನತು

Date:

ಕರ್ತವ್ಯಲೋಪದ ಆರೋಪದ ಮೇಲೆ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯತಿ ಪಿಡಿಒ ರಘುವೀರ್ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

- Advertisement -

ಮರ್ಕಲ್ ಪಂಚಾಯತಿಯ ಪಿಡಿಒ ರಘುವೀರ್ ಮತ್ತು ಅಧ್ಯಕ್ಷ ಮಹೇಶ್‌ ಅವರು ವಿವಿಧ ಸಂದರ್ಭಗಳಲ್ಲಿ ಪಂಚಾಯತಿಯ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಮತ್ತು ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಗಳ ಬಗ್ಗೆ ಶೃಂಗೇರಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಸುದೀಪ್‍ ಅವರು ತನಿಖೆ ನಡೆಸಿದ್ದರು. ತನಿಖಾ ವರಧಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ವರದಿಯಲ್ಲಿ ಆರೋಪಗಳು ಸಾಬೀತಾಗಿದ್ದು, ಪಿಡಿಒ ರಘುವೀರ್ ಅವರನ್ನು ಅಮಾನತು ಮಾಡಲಾಗಿದೆ.

ಪಿಡಿಒ ಮತ್ತು ಅಧ್ಯಕ್ಷರು ಪಂಚಾಯಿತಿಯ ಬಿಲ್ ಕಲೆಕ್ಟರ್ ಹೆಸರಿಗೆ ನಿಯಮಬಾಹಿರವಾಗಿ ಹಣ ಪಾವತಿ ಮಾಡಿದ್ದಾರೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಅನುಮತಿ ಪಡೆಯದೇ ಪಂಚಾಯಿತಿಯ ವಾಹನ ದುರಸ್ತಿ ಮಾಡಿಸಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಚುನಾವಣೆಗಳ ಸಮಯದಲ್ಲಿ ಮತಗಟ್ಟೆ ವೆಚ್ಚಕ್ಕಾಗಿ ಸರ್ಕಾರದಿಂದ ಬಂದ ಹಣವನ್ನು ಗ್ರಾಮ ಪಂಚಾಯತಿ ಖಾತೆಗೆ ವರ್ಗಾಯಿಸದೆ ತಾವೇ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಅಲ್ಲದೆ, 15ನೇ ಹಣಕಾಸು ಯೋಜನೆಯ ಕಾಮಗಾರಿಗಳಲ್ಲಿ ತೆರಿಗೆ ಕಠವಾಣೆ ಮಾಡಿಲ್ಲ. ಕಾಮಗಾರಿಗಳಿಗೆ ನಿಗದಿ ಮಾಡಲಾಗಿದ್ದ ಮೊತ್ತಕ್ಕಿಂತ ಹೆಚ್ಚು ಹಣ ಪಾವತಿಸಿದ್ದಾರೆ. ಖಾಸಗಿ ಎಲೆಕ್ಟ್ರೀಕಲ್ ಅಂಗಡಿಗೆ ನಿಯಮ ಬಾಹಿರವಾಗಿ 81,000 ರೂ. ಪಾವತಿಸಿದ್ದಾರೆ. ಹೀಗೆ, ಹಲವಾರು ಸಂದರ್ಭ ಅಧಿಕಾರ ದುರುಪಯೋಗ ಮತ್ತು ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...